ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.
ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ಅಹೀಮಾಚನು ಹತ್ತಿರ ಬಂದು ಅರಸನಿಗೆ ಶುಭವಾಗಲಿ ಎಂದು ಹೇಳಿ ಸಾಷ್ಟಾಂಗನಮಸ್ಕಾರಮಾಡಿ - ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಅಂದನು.
ಅದಕ್ಕೆ ಅವನು - ಸಮಾಧಾನವಾಗಿರ್ರಿ. ನೀವೇನೂ ಹೆದರಬೇಡಿರಿ; ನಿಮ್ಮ ತಂದೆಗೂ ನಿಮಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿಯೇ ನಿಕ್ಷೇಪ ಸಿಕ್ಕುವಂತೆ ಅನುಗ್ರಹಿಸಿದ್ದಾನೆ; ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದು