Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:7 - ಕನ್ನಡ ಸತ್ಯವೇದವು J.V. (BSI)

7 ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ. ಅವರಿಗೇನೂ ನಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸ ನಡೆಯುತ್ತಿದೆಯೆಂಬ ಸುದ್ದಿಯನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನಿನ್ನ ಕುರಿಗಳ ತುಪ್ಪಟವನ್ನು ಕತ್ತರಿಸುತ್ತಿರುವುದು ನನಗೆ ತಿಳಿಯಿತು. ನಿನ್ನ ಕುರುಬರು ನಮ್ಮೊಡನೆ ಸ್ವಲ್ಪ ಸಮಯವಿದ್ದರು. ನಾವು ಅವರಿಗೆ ಕೆಟ್ಟದ್ದೇನನ್ನೂ ಮಾಡಲಿಲ್ಲ. ಅವರು ಕರ್ಮೆಲಿನಲ್ಲಿ ಸ್ವಲ್ಪ ಸಮಯವಿದ್ದಾಗ ನಾವು ಅವರಿಂದ ಏನನ್ನೂ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಈಗ ನಿನಗೆ ಕುರಿಗಳ ಉಣ್ಣೆ ಕತ್ತರಿಸುವವರು ಉಂಟೆಂದು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿಕಾಯುವವರು ಕರ್ಮೆಲಿನಲ್ಲಿದ್ದ ದಿವಸಗಳೆಲ್ಲಾ ನಾವು ಅವರಿಗೆ ತೊಂದರೆಪಡಿಸಲಿಲ್ಲ. ಅವರು ಒಂದಾದರೂ ಕಳೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:7
9 ತಿಳಿವುಗಳ ಹೋಲಿಕೆ  

ಅಷ್ಟರಲ್ಲಿ ದಾವೀದನು - ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರಮಾಡಿದನು.


ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಸಿಪಾಯಿಗಳು ಸಹ ಬಂದು - ನಾವು ಏನು ಮಾಡಬೇಕು ಎಂದು ಅವನನ್ನು ಕೇಳಿದಾಗ ಅವನು ಅವರಿಗೆ - ಯಾರನ್ನಾದರೂ ಬೆದರಿಸಬೇಡಿರಿ; ಯಾರ ಮೇಲಾದರೂ ಸುಳ್ಳುದೂರು ತಂದು ದುಡ್ಡು ಕಸಕೊಳ್ಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ ಎಂದು ಹೇಳಿದನು.


ಇದಲ್ಲದೆ ಕುಗ್ಗಿದವರೂ ಸಾಲಗಾರರೂ ಮನನೊಂದವರೂ ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ಎರಡು ವರುಷಗಳಾದನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀವಿುನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.


ಅವನು ಅರಸನ ಬಳಿಗೂ ಹೋಗಿ ಅವನನ್ನು - ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರಿಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಚಿತ್ತಯಿಸೋಣವಾಗಲಿ ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು