1 ಸಮುಯೇಲ 25:8 - ಕನ್ನಡ ಸತ್ಯವೇದವು J.V. (BSI)8 ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವದರಲ್ಲಿ ಕೊಡು ಎಂದು ಹೇಳಿರಿ ಅಂದು ಅವರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಈ ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಈ ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’ ” ಎಂದು ಅವರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |