Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:11 - ಕನ್ನಡ ಸತ್ಯವೇದವು J.V. (BSI)

11 ತನ್ನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಸರ್ವೇಶ್ವರನೇ ನನ್ನನ್ನು ತಡೆಯಲಿ. ಈಗ ಬಾ, ಅವನ ತಲೆಯ ಬಳಿಯಲ್ಲಿರುವ ಭರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನನ್ನು ನಾನು ಕೊಲ್ಲುವಂತಹ ಪರಿಸ್ಥಿತಿಯನ್ನು ಎಂದಿಗೂ ನನಗೆ ಕೊಡದಂತೆ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ! ಈಗ ಸೌಲನ ತಲೆಯ ಹತ್ತಿರವಿರುವ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಂಡ ನಂತರ ನಾವು ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:11
11 ತಿಳಿವುಗಳ ಹೋಲಿಕೆ  

ಅವನು ತನ್ನ ಜನರಿಗೆ - ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ಒಡೆಯನೂ ಆಗಿದ್ದಾನೆ; ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿಮಾಡಲಿ ಎಂದು ಹೇಳಿದನು.


ಯೆಹೋವನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಆತನೇ ನನಗೋಸ್ಕರ ನಿನಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ.


ದಾವೀದನು - ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ; ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು ಅಂದನು.


ದಾವೀದನು ಅವನಿಗೆ - ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವದಕ್ಕೆ ಏಕೆ ಭಯಪಡಲಿಲ್ಲ ಎಂದು ಹೇಳಿ


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವವಾದದ್ದೋ ಅದನ್ನೇ ಯೋಚಿಸಿ ಸಾಧಿಸಿರಿ.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆಂಬದಾಗಿ ಬರೆದದೆ.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಜನರು ದಾವೀದನಿಗೆ - ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡಿಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿವಸ ಇದೇ ಅಂದಾಗ ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -


ಅದಕ್ಕೆ ದಾವೀದನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈಹೊತ್ತು ನನ್ನನ್ನು ಅಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿವಸದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವದು ಸರಿಯೋ? ನಾನು ಇಸ್ರಾಯೇಲ್ಯರ ಅರಸನೆಂಬದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು ಎಂದು ನುಡಿದನು.


ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು