1 ಸಮುಯೇಲ 26:14 - ಕನ್ನಡ ಸತ್ಯವೇದವು J.V. (BSI)14 ಅಬ್ನೇರನೇ, ಕಿವಿಗೊಡುವದಿಲ್ಲವೋ ಎಂದು ನೇರನ ಮಗನಾದ ಅವನಿಗೂ ಸೈನಿಕರಿಗೂ ಕೇಳಿಸುವಂತೆ ಕೂಗಲು ಅಬ್ನೇರನು - ಅರಸನನ್ನು ಕೂಗುವ ನೀನಾರು ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಅಬ್ನೇರನೇ ಕಿವಿಗೊಡುವುದಿಲ್ಲವೋ?” ಎಂದು ನೇರನ ಮಗನಾದ ಅವನಿಗೂ, ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ನೇರನು, “ಅರಸನನ್ನು ಕೂಗುವ ನೀನಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಲ್ಲಿಂದ, “ಅಬ್ನೇರನೇ, ನನ್ನ ಮಾತು ಕೇಳಿಸುತ್ತಿದ್ದೇಯೋ?” ಎಂದು ನೇರನ ಮಗನಾದ ಅಬ್ನೇರನಿಗೂ ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ನೇರನು, “ಅರಸನನ್ನು ಕೂಗುವ ನೀನಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾವೀದನು ಸೌಲನ ಸೈನ್ಯವನ್ನೂ ನೇರನ ಮಗನಾದ ಅಬ್ನೇರನನ್ನೂ ಉದ್ದೇಶಿಸಿ, “ಅಬ್ನೇರನೇ, ನನಗೆ ಉತ್ತರಿಸು” ಎಂದು ಕೂಗಿಕೊಂಡನು. ಅಬ್ನೇರನು, “ನೀನು ಯಾರು? ರಾಜನನ್ನು ನೀನು ಕರೆಯುತ್ತಿರುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸೈನಿಕರಿಗೂ ನೇರನ ಮಗನಾದ ಅಬ್ನೇರನಿಗೂ ಕೇಳಿಸುವಂತೆ ಕೂಗಿ, “ಅಬ್ನೇರನೇ, ನೀನು ಉತ್ತರ ಕೊಡುವುದಿಲ್ಲವೋ?” ಎಂದನು. ಅದಕ್ಕೆ ಅಬ್ನೇರನು ಉತ್ತರವಾಗಿ, “ಅರಸನಿಗೆ ಎದುರಾಗಿ ಕೂಗುವ ನೀನು ಯಾರು?” ಎಂದನು. ಅಧ್ಯಾಯವನ್ನು ನೋಡಿ |