1 ಸಮುಯೇಲ 26:15 - ಕನ್ನಡ ಸತ್ಯವೇದವು J.V. (BSI)15 ದಾವೀದನು ಅಬ್ನೇರನಿಗೆ - ನೀನು ಶೂರನಲ್ಲವೋ? ಇಸ್ರಾಯೇಲ್ಯರಲ್ಲಿ ನಿನಗೆ ಸಮಾನರಾರು! ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ? ಜನರಲ್ಲೊಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೋ? ಇಸ್ರಾಯೇಲರಲ್ಲಿ ನಿನಗೆ ಸಮಾನನಾದವನು ಯಾರು? ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ. ಜನರಲ್ಲೊಬ್ಬನು ಒಳಕ್ಕೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೇ? ಇಸ್ರಯೇಲರಲ್ಲಿ ನಿನಗೆ ಸಮನಾರು? ನೀನು ನಿನ್ನ ಒಡೆಯನಾದ ಅರಸನನ್ನು ಏಕೆ ಕಾಯಲಿಲ್ಲ? ಜನರಲ್ಲಿ ಒಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದಾವೀದನು, “ನೀನು ಶೂರನಲ್ಲವೇ? ಇಸ್ರೇಲಿನಲ್ಲಿನ ಇತರ ಶೂರರಿಗಿಂತಲೂ ನೀನು ಉತ್ತಮನಲ್ಲವೇ? ಹೀಗಿರುವಾಗ ನೀನು ನಿನ್ನ ಒಡೆಯನಾದ ರಾಜನನ್ನು ಏಕೆ ರಕ್ಷಿಸಲಿಲ್ಲ? ಒಬ್ಬ ಸಾಮಾನ್ಯ ಮನುಷ್ಯನು ನಿಮ್ಮ ಪಾಳೆಯಕ್ಕೆ ಬಂದಿದ್ದರೂ ನಿಮ್ಮ ಒಡೆಯನಾದ ರಾಜನನ್ನು ಕೊಲ್ಲುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ದಾವೀದನು ಅಬ್ನೇರನಿಗೆ, “ನೀನು ಪರಾಕ್ರಮಶಾಲಿಯಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವುದಕ್ಕೆ ಬಂದಿದ್ದನು. ಅಧ್ಯಾಯವನ್ನು ನೋಡಿ |
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!