Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:24 - ಕನ್ನಡ ಸತ್ಯವೇದವು J.V. (BSI)

24 ನಾನು ಈಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದೆಣಿಸಿದಂತೆ ಯೆಹೋವನು ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾನು ಈ ದಿನ ನಿಮ್ಮ ಜೀವವನ್ನು ಮಾನ್ಯವಾದದ್ದೆಂಣಿಸಿದಂತೆ ಸರ್ವೇಶ್ವರ ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲ ಇಕ್ಕಟ್ಟಿನಿಂದ ಬಿಡಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿನ್ನ ಜೀವವು ನನಗೆ ಮುಖ್ಯವೆಂಬುದನ್ನು ಈ ದಿನ ನಾನು ನಿನಗೆ ತೋರಿಸಿದೆ! ಇದೇ ರೀತಿ, ನನ್ನ ಜೀವವು ತನಗೆ ಮುಖ್ಯವೆಂಬುದನ್ನು ಯೆಹೋವನು ತೋರಿಸುತ್ತಾನೆ! ಯೆಹೋವನು ನನ್ನನ್ನು ಎಲ್ಲಾ ಕೇಡುಗಳಿಂದಲೂ ರಕ್ಷಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:24
17 ತಿಳಿವುಗಳ ಹೋಲಿಕೆ  

ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ; ಎಲ್ಲರಲ್ಲಿ ಕ್ರಿಸ್ತ ನಂಬಿಕೆಯಿಲ್ಲವಲ್ಲಾ.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ನನ್ನ ಪ್ರೀತಿಯೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ಆಶ್ರಯವೂ ನನ್ನ ಜನವನ್ನು ನನಗೆ ಅಧೀನಮಾಡಿದವನೂ ಆತನೇ.


ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.


ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.


ನೀನು ಕೃಪೆಯುಳ್ಳವನಿಗೆ ಕೃಪಾವಂತನೂ ದೋಷವಿಲ್ಲದವನಿಗೆ ನಿರ್ದೋಷಿಯೂ


ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ದಾವೀದನ ಮಾತುಗಳು ಮುಗಿದನಂತರ ಸೌಲನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಅಂದು ಗಟ್ಟಿಯಾಗಿ ಅತ್ತನು.


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬವರಿಗೆ -


ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು