Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:6 - ಕನ್ನಡ ಸತ್ಯವೇದವು J.V. (BSI)

6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:6
22 ತಿಳಿವುಗಳ ಹೋಲಿಕೆ  

ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.


ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.


ಅರಸನು ಯೋವಾಬ್ ಅಬೀಷೈ ಇತ್ತೈ ಎಂಬವರಿಗೆ - ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.


ಆಗ ಬಿಲ್ಲುಗಾರರು ಗೋಡೆಯ ಮೇಲಣಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮಡಿದನು ಎಂಬದೇ.


ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಣಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇನು ಎಂದು ಕೇಳಿದರೆ ನೀನು - ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮೃತಿಹೊಂದಿದನೆಂದು ಹೇಳು ಎಂಬದಾಗಿ


ಒಡನೆ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ - ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು ಎಂದು ಆಜ್ಞಾಪಿಸಿದನು. ಅವನು ಊರೀಯನನ್ನು ಕಳುಹಿಸಿದನು.


ಹಿತ್ತಿಯರೂ ಪೆರಿಜೀಯರೂ ರೆಫಾಯರೂ ಅಮೋರಿಯರೂ


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ಆಮೇಲೆ ಆಕೆಯ ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ -


ಏಸಾವನು ನಾಲ್ವತ್ತು ವರುಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಮಾಡಿಕೊಂಡನು.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ


ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು.


ಐಗುಪ್ತದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಯಿತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಸಿಕ್ಕುತ್ತಿದ್ದವು.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯ ಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು - ಇಸ್ರಾಯೇಲ್ಯರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರೋಧವಾಗಿ ಕರತಂದಿದ್ದಾನೆ ಅಂದುಕೊಂಡು


ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ ಇವರು ಕೆರೆಯ ಈಚೆಯಲ್ಲಿಯೂ ಅವರು ಆಚೆಯಲ್ಲಿಯೂ ಕೂತುಕೊಂಡರು.


ಮಾಕಾ ಊರಿನ ಅಹಸ್ಬೈ ಎಂಬವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ್ ಎಂಬವನ ಮಗನಾದ ಎಲೀಯಾಮ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು