1 ಸಮುಯೇಲ 27:10 - ಕನ್ನಡ ಸತ್ಯವೇದವು J.V. (BSI)10 ಆಕೀಷನು ಅವನನ್ನು - ಈಹೊತ್ತು ಯಾವ ಪ್ರಾಂತದವರನ್ನು ಸೂರೆಮಾಡಿಕೊಂಡು ಬಂದಿರಿ ಎಂದು ಕೇಳುವನು. ದಾವೀದನು ಅವನಿಗೆ - ದಕ್ಷಿಣಪ್ರಾಂತದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು. ಅಧ್ಯಾಯವನ್ನು ನೋಡಿ |