Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:12 - ಕನ್ನಡ ಸತ್ಯವೇದವು J.V. (BSI)

12 ದಾವೀದನ ಹೆಸರು ಸ್ವಜನರಾದ ಇಸ್ರಾಯೇಲ್ಯರಲ್ಲಿ ಅಸಹ್ಯವಾದದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಕೀಷನು ದಾವೀದನಲ್ಲಿ ಭರವಸೆ ಇಡತೊಡಗಿದನು. ಆಕೀಷನು ತನ್ನೊಳಗೆ, “ಈಗ ದಾವೀದನ ಸ್ವಂತ ಜನರೇ ಅವನನ್ನು ದ್ವೇಷಿಸುವರು. ಇಸ್ರೇಲರು ದಾವೀದನನ್ನು ಬಹಳವಾಗಿ ದ್ವೇಷಿಸುತ್ತಾರೆ. ಈಗ ದಾವೀದನು ಶಾಶ್ವತವಾಗಿ ನನ್ನ ಸೇವೆಮಾಡುವನು” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಕೀಷನು ದಾವೀದನನ್ನು ನಂಬಿ, “ಇವನು ತನ್ನ ಜನರಾದ ಇಸ್ರಾಯೇಲರಿಗೆ ಅಸಹ್ಯವಾದನು, ಆದ್ದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:12
6 ತಿಳಿವುಗಳ ಹೋಲಿಕೆ  

ಸೌಲನು ಫಿಲಿಷ್ಟಿಯರ ಠಾಣವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲ್ಯರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು


ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.


ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.


ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ - ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲೇ ಬರಬೇಕೆಂದು ನಿನಗೆ ಗೊತ್ತಿರುತ್ತದಲ್ಲವೋ ಎನ್ನಲು ದಾವೀದನು -


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರು ತಿಳಿದು ಹಣಕೊಟ್ಟು ಬೇತ್‍ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ತರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು