Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:2 - ಕನ್ನಡ ಸತ್ಯವೇದವು J.V. (BSI)

2 ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂತೆಯೇ ಅವನು ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ದಾವೀದನು ತನ್ನ ಆರುನೂರು ಜನರೊಡನೆ ಇಸ್ರೇಲನ್ನು ಬಿಟ್ಟುಹೋದನು. ಅವನು ಮಾವೋಕನ ಮಗನಾದ ಆಕೀಷನಲ್ಲಿಗೆ ಹೋದನು. ಆಕೀಷನು ಗತ್‌ನ ರಾಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರುನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕನ ಮಗ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:2
7 ತಿಳಿವುಗಳ ಹೋಲಿಕೆ  

ಅವನು ತನ್ನ ಜನರಿಗೆ - ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.


ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.


ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.


ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ


ದಾವೀದನು ಕೀಷನ ಮಗನಾದ ಸೌಲನಿಗೆ ಹೆದರಿ ಚಿಕ್ಲಗಿನಲ್ಲಿ ಅಡಗಿಕೊಂಡಿದ್ದಾಗ


ಆಕೀಷನ ಸೇವಕರು - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂಬದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೋ? ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು