1 ಸಮುಯೇಲ 27:3 - ಕನ್ನಡ ಸತ್ಯವೇದವು J.V. (BSI)3 ಅವನೂ ಅವನ ಜನರೂ ತಮ್ಮತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಿಸಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನೂ ಅವನ ಜನರೂ ತಮ್ಮ ತಮ್ಮ ಕುಟುಂಬಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ನೆಲೆಸಿದರು. ದಾವೀದನ ಹೆಂಡತಿಯರಾಗಿದ್ದ ಜೆಸ್ರೀಲಿನವಳಾದ ಅಹೀನೋವಮಳು ಹಾಗು ಕರ್ಮೇಲ್ಯನಾದ ನಾಬಾಲನ ಹೆಂಡತಿ ಆಗಿದ್ದ ಅಬೀಗೈಲಳು ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದಾವೀದನೂ ಅವನ ಜನರೂ ಅವರ ಕುಟುಂಬಗಳವರೂ ಆಕೀಷನೊಂದಿಗೆ ಗತ್‌ನಲ್ಲಿ ನೆಲೆಸಿದರು. ದಾವೀದನ ಜೊತೆಯಲ್ಲಿ ಅವನ ಇಬ್ಬರು ಹೆಂಡತಿಯರೂ ಇದ್ದರು. ಅವರು ಯಾರೆಂದರೆ, ಇಜ್ರೇಲ್ಯಳಾದ ಅಹೀನೋವಮಳು ಮತ್ತು ಕರ್ಮೆಲಿನ ಅಬೀಗೈಲಳು. ಅಬೀಗೈಲಳು ನಾಬಾಲನ ವಿಧವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದಾವೀದನು ಗತ್ ಊರಿನಲ್ಲಿ ಆಕೀಷನ ಬಳಿಯಲ್ಲಿ ತಾನೂ, ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ, ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾದ ಅಹೀನೋವಮಳು, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಸಹಿತವಾಗಿಯೂ ಇದ್ದರು. ಅಧ್ಯಾಯವನ್ನು ನೋಡಿ |