Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:5 - ಕನ್ನಡ ಸತ್ಯವೇದವು J.V. (BSI)

5 ಒಂದು ದಿನ ದಾವೀದನು ಆಕೀಷನಿಗೆ - ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿರುವದಾದರೆ ಯಾವದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸು, ನಾನು ಅಲ್ಲಿ ವಾಸಿಸುವೆನು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಂದು ದಿನ ದಾವೀದನು ಆಕೀಷನಿಗೆ, “ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರು ಒಂದು ಪಟ್ಟಣದಲ್ಲಿ ನನಗೆ ಸ್ಥಳಕೊಡು. ನಾನು ಅಲ್ಲಿ ವಾಸಮಾಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಂದು ದಿನ ದಾವೀದನು ಆಕೀಷನಿಗೆ, “ನಿಮ್ಮ ಸೇವಕನಾದ ನಾನು ನಿಮ್ಮ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸಿ; ನಾನು ಅಲ್ಲೆ ವಾಸಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಆಕೀಷನಿಗೆ, “ನೀನು ನನ್ನನ್ನು ಮೆಚ್ಚಿಕೊಂಡಿದ್ದರೆ ಯಾವುದಾದರೊಂದು ಊರಲ್ಲ್ಲಿ ನನಗೆ ಸ್ಥಳವನ್ನು ಕೊಡು. ನಾನು ನಿನ್ನ ಸೇವಕನಷ್ಟೆ. ನಾನು ನಿನ್ನೊಡನೆ ಈ ರಾಜಧಾನಿಯಲ್ಲಿ ಇರುವುದಕ್ಕಿಂತ ಅಲ್ಲಿ ವಾಸಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನು ಆಕೀಷನಿಗೆ, “ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದರೆ, ಗ್ರಾಮಾಂತರಗಳಲ್ಲಿ ನಾನು ಇರುವುದಕ್ಕೆ ಒಂದು ಸ್ಥಳ ನನಗೆ ಕೊಡು. ನಿನ್ನ ದಾಸನು ಏಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:5
4 ತಿಳಿವುಗಳ ಹೋಲಿಕೆ  

ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು.


ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿ ಆಮೇಲೆ ಅವನನ್ನು ಹುಡುಕಲೇ ಇಲ್ಲ.


ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದದರಿಂದ ಚಿಕ್ಲಗ್ ಎಂಬದು ಇಂದಿನವರೆಗೂ ಯೆಹೂದರಾಜರಿಗೆ ಸೇರಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು