1 ಸಮುಯೇಲ 27:8 - ಕನ್ನಡ ಸತ್ಯವೇದವು J.V. (BSI)8 ಈ ಕಾಲದಲ್ಲಿ ಅವನೂ ಅವನ ಜನರೂ ತೇಲಾವಿುನಿಂದ ಶೂರಿನವರೆಗೂ ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಬಿದ್ದು ಸುಲುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ಅವಧಿಯಲ್ಲಿ ಅವನು ಮತ್ತು ಅವನ ಜನರು ಗೆಷೂರ್ಯರ ಮೇಲೆ, ಗಿಜ್ರೀಯರ ಮೇಲೆ ಹಾಗು ಅಮಾಲೇಕ್ಯರ ಮೇಲೆ ದಾಳಿಮಾಡುತ್ತಿದ್ದರು. ಇವರುಗಳ ಪ್ರಾಂತ್ಯಗಳು ತೇಲಾಮಿನಿಂದ ಶೂರಿನವರೆಗೂ ಹಾಗು ಈಜಿಪ್ಟಿನವರೆಗೂ ವಿಸ್ತರಿಸಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು. ಅಧ್ಯಾಯವನ್ನು ನೋಡಿ |