Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:10 - ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಸೌಲನು - ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವದಿಲ್ಲ ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಸೌಲನು, ” ಸರ್ವೇಶ್ವರನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ,” ಎಂದು ಆಕೆಗೆ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸೌಲನು, “ಯೆಹೋವ ದೇವರ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬರುವುದಿಲ್ಲ,” ಎಂದು ಅವಳಿಗೆ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:10
10 ತಿಳಿವುಗಳ ಹೋಲಿಕೆ  

ನೀನು ನನ್ನನ್ನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧ ರಾಜ್ಯವನ್ನು ಕೇಳಿದರೂ, ನಿನಗೆ ಕೊಡುತ್ತೇನೆ ಎಂದು ಆಣೆಯಿಟ್ಟುಕೊಂಡು ಹೇಳಿದನು.


ಅವನು ತಿರಿಗಿ - ಅಲ್ಲ, ಆ ಮನುಷ್ಯನನ್ನು ನಾನರಿಯೆನು ಎಂದು ಆಣೆಯಿಟ್ಟುಕೊಂಡು ಹೇಳಿದನು.


ಆಗ ಆ ಸ್ತ್ರೀಯು - ಸಮೀಪಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು ಎಂದು ಬೇಡಿಕೊಂಡಳು. ಅದಕ್ಕೆ ಅರಸನು - ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ ಎಂದು ಹೇಳಿದನು.


ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ - ಯೆಹೋವನಾಣೆ, ಅವನನ್ನು ಕೊಲ್ಲುವದಿಲ್ಲ ಎಂದು ಪ್ರಮಾಣಮಾಡಿದನು.


ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ ಅವನು ಸಾಯಲೇಬೇಕು ಎಂದು ಹೇಳಿದನು; ಜನರು ಏನೂ ಮಾತಾಡದೆ ಮೌನವಾಗಿದ್ದರು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವದಿಲ್ಲ.


ನೀವು ಇದರ ಹಣ್ಣನ್ನು ತಿಂದಾಗಲೇ ನಿಮ್ಮ ಕಣ್ಣುಗಳು ತೆರೆಯುವವು; ನೀವು ದೇವರಂತೆ ಆಗಿ ಒಳ್ಳೇದರ ಕೆಟ್ಟದ್ದರ ಭೇದವನ್ನು ಅರಿತವರಾಗುವಿರಿ; ಇದು ದೇವರಿಗೆ ಚೆನ್ನಾಗಿ ಗೊತ್ತುಂಟು ಅಂದಿತು.


ಆಗ ಆಕೆಯು ಅವನಿಗೆ - ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ; ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವದೇಕೆ ಅಂದಳು.


ಆಗ ಸ್ತ್ರೀಯು - ನಿನಗೆ ಯಾರನ್ನು ಬರಮಾಡಬೇಕು ಎನ್ನಲು - ಸಮುವೇಲನನ್ನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು