Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:11 - ಕನ್ನಡ ಸತ್ಯವೇದವು J.V. (BSI)

11 ಆಗ ಸ್ತ್ರೀಯು - ನಿನಗೆ ಯಾರನ್ನು ಬರಮಾಡಬೇಕು ಎನ್ನಲು - ಸಮುವೇಲನನ್ನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಆ ಸ್ತ್ರೀ, “ನಿನಗೆ ಯಾರನ್ನು ಬರಮಾಡಬೇಕು?” ಎಂದಳು. “ಸಮುವೇಲನನ್ನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. ಸೌಲನು, “ಸಮುವೇಲನನ್ನು ಬರಮಾಡು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವಳು, “ನಿನಗೆ ನಾನು ಯಾರನ್ನು ಇಲ್ಲಿ ಬರಮಾಡಬೇಕು?” ಎಂದಳು. ಅದಕ್ಕವನು, “ಸಮುಯೇಲನನ್ನು ಬರಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:11
5 ತಿಳಿವುಗಳ ಹೋಲಿಕೆ  

ಅದಕ್ಕೆ ಸೌಲನು - ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವದಿಲ್ಲ ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.


ಆ ಸ್ತ್ರೀಯು ಸಮುವೇಲನನ್ನು ಕಂಡ ಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೋ ಅಂದಳು.


ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.


ಆಗ ಸಮುವೇಲನು ಸೌಲನನ್ನು - ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದಿ ಎಂದು ಕೇಳಿದನು. ಅದಕ್ಕೆ ಸೌಲನು - ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಬಿಟ್ಟು ದೂರಹೋಗಿದ್ದಾನೆ; ಆತನು ನನಗೆ ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು ಅಂದನು.


ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು