Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:12 - ಕನ್ನಡ ಸತ್ಯವೇದವು J.V. (BSI)

12 ಆ ಸ್ತ್ರೀಯು ಸಮುವೇಲನನ್ನು ಕಂಡ ಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೋ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಸ್ತ್ರೀ ಸಮುವೇಲನನ್ನು ಕಂಡಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೇ?,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಂತೆಯೇ ಆಯಿತು. ಆ ಹೆಂಗಸು ಸಮುವೇಲನನ್ನು ಕಂಡ ಕೊಡಲೇ ಗಟ್ಟಿಯಾಗಿ ಅರಚಿದಳು. ಅವಳು ಸೌಲನಿಗೆ, “ನೀನು ನನ್ನನ್ನು ವಂಚಿಸಿದೆ! ನೀನೇ ಸೌಲನು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಸ್ತ್ರೀಯು ಸಮುಯೇಲನನ್ನು ಕಂಡಾಗ ಮಹಾಶಬ್ದದಿಂದ ಕೂಗಿದಳು. ಆ ಸ್ತ್ರೀಯು, “ಏಕೆ ನನ್ನನ್ನು ಮೋಸಮಾಡಿದಿ? ನೀನೇ ಸೌಲನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:12
5 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಅವನಿಗೆ - ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆಂದೂ ಆಕೆಗೆ ಇಂಥಿಂಥ ಉತ್ತರ ಕೊಡಬೇಕೆಂದೂ ತಿಳಿಸಿದ್ದನು.


ಸಮುವೇಲನು ಮೃತಿಹೊಂದಿದ್ದನು. ಇಸ್ರಾಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟಿದ್ದನು.


ಬೆಳಿಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು


ಆಗ ಸ್ತ್ರೀಯು - ನಿನಗೆ ಯಾರನ್ನು ಬರಮಾಡಬೇಕು ಎನ್ನಲು - ಸಮುವೇಲನನ್ನು ಎಂದು ಉತ್ತರಕೊಟ್ಟನು.


ಅರಸನು - ಹೆದರಬೇಡ; ನಿನಗೇನು ಕಾಣಿಸುತ್ತದೆ ಎಂದು ಆಕೆಯನ್ನು ಕೇಳಲು - ಭೂವಿುಯೊಳಗಿಂದ ಒಬ್ಬ ದೇವನು ಬರುತ್ತಿರುವದನ್ನು ನೋಡುತ್ತೇನೆ ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು