Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:15 - ಕನ್ನಡ ಸತ್ಯವೇದವು J.V. (BSI)

15 ಆಗ ಸಮುವೇಲನು ಸೌಲನನ್ನು - ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದಿ ಎಂದು ಕೇಳಿದನು. ಅದಕ್ಕೆ ಸೌಲನು - ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಬಿಟ್ಟು ದೂರಹೋಗಿದ್ದಾನೆ; ಆತನು ನನಗೆ ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:15
18 ತಿಳಿವುಗಳ ಹೋಲಿಕೆ  

ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದದರಿಂದ ಸೌಲನು ದಾವೀದನಿಗೆ ಭಯಪಟ್ಟು


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಆಗ ಸ್ತ್ರೀಯು - ನಿನಗೆ ಯಾರನ್ನು ಬರಮಾಡಬೇಕು ಎನ್ನಲು - ಸಮುವೇಲನನ್ನು ಎಂದು ಉತ್ತರಕೊಟ್ಟನು.


ಆಗ ಸೌಲನು ವಸ್ತ್ರಾದಿಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆ ಸೇರಿ - ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು; ನಾನು ಯಾವನ ಹೆಸರನ್ನು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು ಎಂದು ಆಕೆಯನ್ನು ಬೇಡಿಕೊಂಡನು.


ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು.


ಆಗ ಅವಳು - ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆಂದು ಕೂಗಲು ಅವನು ಎಚ್ಚತ್ತು - ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.


ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು.


ಆಗ ಸಮುವೇಲನು - ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವದೇಕೆ?


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು