Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:19 - ಕನ್ನಡ ಸತ್ಯವೇದವು J.V. (BSI)

19 ಆತನು ನಿನ್ನ ಕೂಡ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ; ಆತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ನಿನ್ನ ಸಹಿತವಾಗಿ ಇಸ್ರಾಯೇಲನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು. ನಾಳೆ ನೀನೂ, ನಿನ್ನ ಪುತ್ರರೂ ನನ್ನ ಸಂಗಡ ಇರುವಿರಿ. ಯೆಹೋವ ದೇವರು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:19
12 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಅನನೀಯನು ಕೇಳಿದ ಕೂಡಲೆ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಹಿಡಿಯಿತು.


ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.


ಯೆಹೋವನು ತನ್ನ ಹತ್ತಿರ ನಿಂತವರನ್ನು - ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರ ಕೊಟ್ಟರು.


ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನೊಡನೆ ನಾಶವಾಗುವಿರಿ ಎಂದು ಹೇಳಿದನು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು; ಐಗುಪ್ತರಾಜ್ಯವು ಸ್ಥಾಪಿಸಲ್ಪಟ್ಟ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿಲ್ಲ.


ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿವಸ ಊಟ ಮಾಡಿರಲಿಲ್ಲವಾದದರಿಂದ ಅವನಲ್ಲಿ ಬಲವೇ ಇರಲಿಲ್ಲ.


ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವದು, ದಣಿದವರು ದಣುವಾರಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು