Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:2 - ಕನ್ನಡ ಸತ್ಯವೇದವು J.V. (BSI)

2 ಹೌದು, ನಿನ್ನ ದಾಸನ ಸಾಹಸವು ಗೊತ್ತಾಗುವದು ಅಂದನು. ಆಕೀಷನು ಅವನಿಗೆ - ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇವಿುಸಿಕೊಳ್ಳುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಆಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದಾವೀದನು, “ಹೌದು, ತಮ್ಮ ಸೇವಕನ ಸಾಹಸ ತಮಗೇ ಗೊತ್ತಾಗುವುದು,” ಎಂದನು. ಆಕೀಷನು, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾವೀದನು ಆಕೀಷನಿಗೆ, “ನಿಶ್ಚಯವಾಗಿ ನಿನ್ನ ದಾಸನು ಮಾಡುವುದನ್ನು ನೀನೇ ತಿಳಿದುಕೊಳ್ಳುವಿ,” ಎಂದನು. ಆಕೀಷನು ದಾವೀದನಿಗೆ, “ಎಂದೆಂದಿಗೂ ನಾನು ನಿನ್ನನ್ನು ಕಾವಲುಗಾರನಾಗಿ ಮಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:2
6 ತಿಳಿವುಗಳ ಹೋಲಿಕೆ  

ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಆಕೀಷನು ಅವನನ್ನು - ಈಹೊತ್ತು ಯಾವ ಪ್ರಾಂತದವರನ್ನು ಸೂರೆಮಾಡಿಕೊಂಡು ಬಂದಿರಿ ಎಂದು ಕೇಳುವನು. ದಾವೀದನು ಅವನಿಗೆ - ದಕ್ಷಿಣಪ್ರಾಂತದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುವನು.


ಮಗನು ಮೊಲೆಬಿಡುವವರೆಗೂ ನಾನು ಬರುವದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುವೆನು ಎಂದು ಹೇಳಿದಳು.


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.


ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ ಸಾವಿರ ಸಾವಿರ ಮಂದಿಯಾಗಿಯೂ ಬರುತ್ತಿರುವಾಗ ದಾವೀದನು ತನ್ನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂದಳದಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು