Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:23 - ಕನ್ನಡ ಸತ್ಯವೇದವು J.V. (BSI)

23 ಅವನು - ಒಲ್ಲೆನು; ಊಟಮಾಡುವದಿಲ್ಲ ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು, “ಒಲ್ಲೆ; ಊಟಮಾಡುವುದಿಲ್ಲ,” ಎಂದನು. ಆದರೆ, ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡಿದ್ದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು. ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:23
11 ತಿಳಿವುಗಳ ಹೋಲಿಕೆ  

ನನ್ನ ಪಿತ್ರಾರ್ಜಿತಸ್ವಾಸ್ತ್ಯವನ್ನು ನಿನಗೆ ಕೊಡುವದಿಲ್ಲವೆಂದು ನಾಬೋತನು ಹೇಳಿದದರಿಂದ ಅಹಾಬನು ಸಿಟ್ಟಿನಿಂದ ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಆದರೆ ಅವರು - ನಮ್ಮ ಸಂಗಡ ಇರು, ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತಮಾಡಲು ಆತನು ಅವರ ಕೂಡ ಇರುವದಕ್ಕೆ ಊರೊಳಕ್ಕೆ ಹೋದನು.


ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.


ಮನಗುಂದಿದವನಿಗೆ ಸಂಗೀತಹಾಡುವದು ಚಳಿದಿನದಲ್ಲಿ ಬಟ್ಟೆ ತೆಗೆದ ಹಾಗೂ ಸೋಡ ಉಪ್ಪಿಗೆ ಹುಳಿಹೊಯ್ದ ಹಾಗೂ.


ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ - ಅಪ್ಪನವರೇ, ಪ್ರವಾದಿಯು ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲಾ; ಹಾಗಾದರೆ ಸ್ನಾನಮಾಡಿ ಶುದ್ಧನಾಗು ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು ಅಂದರು.


ಒಂದು ಸಾರಿ ಎಲೀಷನು ಶೂನೇವಿುಗೆ ಹೋದನು. ಅಲ್ಲಿನ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಆದದರಿಂದ ಈಗ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು; ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು ಎಂದು ಹೇಳಿದಳು.


ಅಲ್ಲಿ ಬಿಳೀ ನೂಲಿನ ಬಟ್ಟೆಗಳೂ ನೀಲಿಬಟ್ಟೆಗಳೂ ಧೂಮ್ರವರ್ಣವುಳ್ಳ ನಾರಿನ ದಾರದಿಂದ ಸಂಗಮೀರ ಕಲ್ಲು ಕಂಬಗಳಲ್ಲಿನ ಬೆಳ್ಳಿಯ ಉಂಗುರಗಳಿಗೆ ಕಟ್ಟಲ್ಪಟ್ಟಿದ್ದವು. ಜರತಾರೆಯ ಕಸೂತಿ ಹಾಕಿರುವ ಲೋಡುಗಳು ಕೆಂಪು ಬಿಳಿ ಹಳದಿ ಕಪ್ಪು ಬಣ್ಣಗಳುಳ್ಳ ಸಂಗಮೀರ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲ್ಪಟ್ಟಿದ್ದವು.


ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿದ್ದಿ; ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು