10 ನೀನು ಮತ್ತು ನಿನ್ನ ಜನರು ಮುಂಜಾನೆಯಲ್ಲಿಯೇ ಹಿಂದಿರುಗಿ ಹೋಗಿ. ನಾನು ನಿನಗೆ ಕೊಟ್ಟಿರುವ ನಗರಕ್ಕೆ ಹಿಂದಿರುಗು. ಅಧಿಪತಿಗಳು ನಿನ್ನ ಬಗ್ಗೆ ಹೇಳುತ್ತಿರುವ ಕೆಟ್ಟ ಮಾತುಗಳಿಗೆ ಗಮನ ನೀಡಬೇಡ. ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ಸೂರ್ಯನು ಮೇಲೇರುವಷ್ಟರಲ್ಲಿ ನೀನು ನಮ್ಮನ್ನು ಬಿಟ್ಟುಹೋಗು” ಎಂದು ಹೇಳಿದನು.
ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಮಂದಿ ಮನಸ್ಸೆಯವರು ಬಂದು ಅವನನ್ನು ಕೂಡಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನಾಗಲಿಲ್ಲ; ಅವರ ಪ್ರಭುಗಳು - ಇವನು ನಮ್ಮ ತಲೆಗಳನ್ನು ಕಡಿದು ತಿರಿಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು ಎಂಬದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.
ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.