1 ಸಮುಯೇಲ 29:5 - ಕನ್ನಡ ಸತ್ಯವೇದವು J.V. (BSI)5 ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂದು ಸ್ತ್ರೀಯರು ಕುಣಿಯುತ್ತಾ ಪರಸ್ಪರವಾಗಿ ಹಾಡಿದ್ದು ಈ ದಾವೀದನನ್ನೇ ಕುರಿತಲ್ಲವೋ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ‘ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು’ ಎಂದು ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಈ ದಾವೀದನನ್ನು ಕುರಿತೇ ಅಲ್ಲವೇ?” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ‘ಸೌಲನು ಕೊಂದನು ಸಾವಿರಗಟ್ಟಳೆ, ದಾವೀದನೋ ಕೊಂದನು ಹತ್ತು ಸಾವಿರಗಟ್ಟಳೆ,’ ಎಂದು ಮಹಿಳೆಯರು ಕುಣಿಯುತ್ತಾ ಪರಸ್ಪರವಾಗಿ ಹಾಡಿದ್ದು ಈ ದಾವೀದನನ್ನೇ ಕುರಿತು ಅಲ್ಲವೇ?’ ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದಾವೀದನೆಂಬ ಈ ವ್ಯಕ್ತಿಯನ್ನು ಕುರಿತು, ಇಸ್ರೇಲರು ಕುಣಿಯುತ್ತಾ ಹಾಡುವ ಹಾಡು ಹೀಗಿದೆ: ‘ಸೌಲನು ಸಾವಿರಗಟ್ಟಲೆ ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರಗಟ್ಟಲೆ ಶತ್ರುಗಳನ್ನು ಕೊಂದನು!’” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸ್ತ್ರೀಯರು ತಮ್ಮ ನೃತ್ಯಗಳಲ್ಲಿ ಹಾಡಿದ ದಾವೀದನು ಇವನಲ್ಲವೇ: “ ‘ಸೌಲನು ಸಾವಿರ ಜನರನ್ನೂ, ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನು.’ ” ಅಧ್ಯಾಯವನ್ನು ನೋಡಿ |