Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:1 - ಕನ್ನಡ ಸತ್ಯವೇದವು J.V. (BSI)

1 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನಷ್ಟೆ. ಆ ಕಾಲದಲ್ಲಿ ದೇವೋಕ್ತಿಗಳು ವಿರಳವಾಗಿದ್ದವು, ದೇವದರ್ಶನಗಳು ಅಪರೂಪವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:1
11 ತಿಳಿವುಗಳ ಹೋಲಿಕೆ  

ನಮ್ಮ ಆರಾಧನಾಚಿಹ್ನೆಗಳು ಈಗ ಕಾಣುವದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.


ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು.


ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನನ್ನು ಸೇವಿಸುತ್ತಿದ್ದನು.


ಬಾಲಕನಾದ ಸಮುವೇಲನು ಏಫೋದೆಂಬ ನಾರುಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಮನುಷ್ಯರನ್ನು ಅಪರಂಜಿಗಿಂತಲೂ ಮಾನವರನ್ನು ಓಫೀರಿನ ಬಂಗಾರಕ್ಕಿಂತಲೂ ಅಪರೂಪವಾಗುವಂತೆ ಮಾಡುವೆನು.


ಅನಂತರ ಸಮುವೇಲನು ಮಲಗಿ ಹೊತ್ತಾರೆಯಲ್ಲೆದ್ದು ಯೆಹೋವಮಂದಿರದ ಕದಗಳನ್ನು ತೆರೆದನು; ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವದಕ್ಕೆ ಭಯಪಟ್ಟನು.


ನನ್ನ ದೃಷ್ಟಿಗೂ ಮನಸ್ಸಿಗೂ ಸರಿಯಾದದ್ದನ್ನೇ ಮಾಡುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡಬಿದ್ದು - ನಮಗೆ ಒಂದು ದುಡ್ಡನ್ನೂ ರೊಟ್ಟಿಯ ಚೂರನ್ನೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವದಕ್ಕಾದರೂ ನಮ್ಮನ್ನು ಸೇರಿಸಿಕೋ ಎಂದು ಅವನನ್ನು ಬೇಡಿಕೊಳ್ಳುವರು ಎಂಬದೇ ಅಂದನು.


ದೇವದರ್ಶಕರಿಲ್ಲದಿರುವಲ್ಲಿ ಜನರು ಅಂಕೆಮೀರುವರು; ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು