Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:13 - ಕನ್ನಡ ಸತ್ಯವೇದವು J.V. (BSI)

13 ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯತೀರಿಸುವೆನು, ಎಂದು ಹೇಳಿದ್ದೆನು. ಏಕೆಂದರೆ ತನ್ನ ಪುತ್ರರು ದೇವರ ನಿಂದನೆ ಮಾಡಿದಾಗ, ಅವರನ್ನು ಹತೋಟಿಗೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:13
17 ತಿಳಿವುಗಳ ಹೋಲಿಕೆ  

ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಬುದ್ಧಿ ಬರುವದೆಂದು ಮಗನನ್ನು ಶಿಕ್ಷಿಸು; ಹಾಳುಮಾಡಲು ಮನಸ್ಸುಮಾಡಬೇಡ.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.


ಈಗಲೇ ನಿನಗೆ ಪ್ರಳಯವು ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


ಅವನ ತಂದೆಯು - ನೀನು ಹಾಗೆ ಹೀಗೆ ಮಾಡಿದ್ದೇಕೆ ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿದ್ದು ಇರಲಿಲ್ಲ. ಅವನು ಬಹುಸುಂದರನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನು.


ಬೆತ್ತಬೆದರಿಕೆಗಳಿಂದ ಜ್ಞಾನವುಂಟಾಗುವದು; ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.


ಮತ್ತು ನಮ್ಮ ಹೃದಯವು ಯಾವ ವಿಷಯದಲ್ಲಿಯಾದರೂ ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೂ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವನಾಗಿದ್ದಾನೆಂದು ನಾವು ತಿಳಿದು ದೇವರ ಸಮಕ್ಷಮದಲ್ಲಿ ನಮ್ಮ ಹೃದಯವನ್ನು ಸಮಾಧಾನಪಡಿಸುವೆವು.


ಜನಾಂಗಗಳು ಎಚ್ಚರಗೊಂಡು ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಲಿ; ಅಲ್ಲೇ ಸುತ್ತಣ ಜನಾಂಗಗಳಿಗೆಲ್ಲಾ ನ್ಯಾಯತೀರಿಸಲು ಆಸೀನನಾಗುವೆನು.


ನೀನೂ ಅನೇಕ ವೇಳೆ ಇತರರನ್ನು ಶಪಿಸಿದ್ದೀ ಎಂಬದಕ್ಕೆ ನಿನ್ನ ಮನಸ್ಸೇ ಸಾಕ್ಷಿ.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.


ಇದಲ್ಲದೆ ಅರಸನು ಅವನಿಗೆ - ನೀನು ನನ್ನ ತಂದೆಯಾದ ದಾವೀದನಿಗೆ ವಿರೋಧವಾಗಿ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.


ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.


ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ ಮೊಂಡನೂ ಅವಿಧೇಯನೂ ಆಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು