Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನು ತಿರಿಗಿ - ಸಮುವೇಲನೇ ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ - ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅನ್ನಲು ಅವನು - ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಪುನಃ, “ಸಮುವೇಲನೇ,” ಎಂದು ಕರೆದರು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಅವನು, “ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂತರ ಯೆಹೋವನು, “ಸಮುವೇಲನೇ” ಎಂದು ಮತ್ತೆ ಕರೆದನು. ಸಮುವೇಲನು ಮತ್ತೆ ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಎಂದು ಹೇಳಿದನು. ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು, “ಸಮುಯೇಲನೇ,” ಎಂದು ಅವನನ್ನು ತಿರುಗಿ ಕರೆದರು. ಆಗ ಸಮುಯೇಲನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ; ನನ್ನನ್ನು ಕರೆದೆಯಲ್ಲಾ,” ಎಂದನು. ಅದಕ್ಕವನು, “ನನ್ನ ಮಗನೇ, ನಾನು ಕರೆಯಲಿಲ್ಲ; ನೀನು ಹೋಗಿ ಮಲಗಿಕೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:6
6 ತಿಳಿವುಗಳ ಹೋಲಿಕೆ  

ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ಚಾದೋಕನ ಮಗನಾದ ಅಹೀಮಾಚನು ತಿರಿಗಿ ಯೋವಾಬನಿಗೆ - ಆಗುವದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವದಕ್ಕೆ ನನಗೆ ಅಪ್ಪಣೆಕೊಡು ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು - ಮಗನೇ, ಯಾಕೆ ಹೋಗಬೇಕನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವದಿಲ್ಲವಲ್ಲಾ ಅಂದನು.


ಆ ಮನುಷ್ಯನು ಏಲಿಗೆ - ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು ಅನ್ನಲು ಏಲಿಯು ಅವನನ್ನು - ನನ್ನ ಮಗನೇ, ವರ್ತಮಾನವೇನು ಎಂದು ಕೇಳಿದನು.


ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ - ನೀವು ಹೇಳಿದ ನಿಮ್ಮ ಕಿರೀ ತಮ್ಮನು ಇವನೋ ಎಂದು ಕೇಳಿ ಅವನಿಗೆ - ಮಗನೇ, ದೇವರ ದಯೆ ನಿನ್ನ ಮೇಲಿರಲಿ ಎಂದು ಹೇಳಿದನು.


ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಎನ್ನಲು ಏಲಿಯು - ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ ಅಂದನು. ಸಮುವೇಲನು ಹೋಗಿ ಮಲಗಿದನು.


ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋತ್ತರಗಳನ್ನು ಹೊಂದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು