Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:7 - ಕನ್ನಡ ಸತ್ಯವೇದವು J.V. (BSI)

7 ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋತ್ತರಗಳನ್ನು ಹೊಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋಕ್ತಿಗಳನ್ನು ಹೊಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈವರೆಗೂ ಸಮುವೇಲನಿಗೆ ಸರ್ವೇಶ್ವರನ ನೇರ ಅನುಭವ ಆಗಿರಲಿಲ್ಲ. ದೇವರ ವಾಣಿ ಅವನಿಗೆ ಕೇಳಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಯೆಹೋವನು ಅವನೊಂದಿಗೆ ನೇರವಾಗಿ ಮಾತಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಮುಯೇಲನು ಆವರೆಗೂ ಯೆಹೋವ ದೇವರನ್ನು ತಿಳಿದುಕೊಂಡಿರಲಿಲ್ಲ. ಯೆಹೋವ ದೇವರ ವಾಕ್ಯವು ಅವನಿಗೆ ಪ್ರಕಟವಾಗಿರಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:7
5 ತಿಳಿವುಗಳ ಹೋಲಿಕೆ  

ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ ಎಂದು ಅವರನ್ನು ಕೇಳಲು ಅವರು ಅವನಿಗೆ - ಇಲ್ಲ, ಪವಿತ್ರಾತ್ಮವರವು ಉಂಟೆಂಬದನ್ನೇ ನಾವು ಕೇಳಲಿಲ್ಲ ಅಂದರು.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.


ನಾನು ಬಾಲಕನಾಗಿದ್ದಾಗ ಬಾಲಕನ ಮಾತುಗಳನ್ನಾಡಿದೆನು, ಬಾಲಕನ ಸುಖ ದುಃಖಗಳನ್ನು ಅನುಭವಿಸಿದೆನು, ಬಾಲಕನ ಆಲೋಚನೆಗಳನ್ನು ಮಾಡಿಕೊಂಡೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.


ಯೆಹೋವನು ತಿರಿಗಿ - ಸಮುವೇಲನೇ ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ - ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅನ್ನಲು ಅವನು - ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ ಎಂದನು.


ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ - ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ ಅನ್ನಲು ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ - ಹೋಗಿ ಮಲಗಿಕೋ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು