Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:19 - ಕನ್ನಡ ಸತ್ಯವೇದವು J.V. (BSI)

19 ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ ಗಂಡುಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರಿಗಿ ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರುಗಿ ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು-ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ, ಎಲ್ಲವನ್ನೂ ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಏನೂ ಕಳೆದು ಹೋಗಿರಲಿಲ್ಲ. ಅವರು ತಮ್ಮ ಎಲ್ಲ ಮಕ್ಕಳನ್ನೂ ಮುದುಕರನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಮತ್ತೆ ಪಡೆದುಕೊಂಡರು. ಅವರು ತಮ್ಮ ಬೆಲೆಬಾಳುವ ವಸ್ತುಗಳನ್ನೂ ಅಮಾಲೇಕ್ಯರು ತೆಗೆದುಕೊಂಡು ಹೋಗಿದ್ದ ಎಲ್ಲವನ್ನೂ ಮತ್ತೆ ಪಡೆದುಕೊಂಡರು. ಹೀಗೆ ದಾವೀದನು ಎಲ್ಲವನ್ನೂ ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ತೆಗೆದುಕೊಂಡು ಹೋದ ಕಿರಿಯರಲ್ಲಾದರೂ, ಹಿರಿಯರಲ್ಲಾದರೂ, ಪುತ್ರರಲ್ಲಾದರೂ, ಪುತ್ರಿಯರಲ್ಲಾದರೂ, ಕೊಳ್ಳೆಯಾದ ಯಾವ ವಸ್ತುಗಳಲ್ಲಾದರೂ ಒಂದೂ ಕಡಿಮೆ ಇಲ್ಲದ ಹಾಗೆ, ದಾವೀದನು ಎಲ್ಲವನ್ನು ತಿರುಗಿ ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:19
8 ತಿಳಿವುಗಳ ಹೋಲಿಕೆ  

ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.


ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.


ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನು ತೆಗೆದುಕೊಂಡನು. ಅವನ ಜನರು - ಇವು ದಾವೀದನ ಕೊಳ್ಳೆ ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು