Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:23 - ಕನ್ನಡ ಸತ್ಯವೇದವು J.V. (BSI)

23 ಆಗ ದಾವೀದನು ಅವರಿಗೆ - ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ದಾವೀದನು ಅವರಿಗೆ, “ಸಹೋದರರೇ, ಸರ್ವೇಶ್ವರ ನಮ್ಮನ್ನು ಕಾಪಾಡಿ, ನಮಗೆ ವಿರುದ್ಧ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ, ನಮಗೆ ಇಷ್ಟನ್ನೆಲ್ಲಾ ಅನುಗ್ರಹಿಸಿದ ಮೇಲೆ ನೀವು ಹೀಗೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದಾವೀದನು, “ನನ್ನ ಸಹೋದರರೇ, ಆ ರೀತಿ ಮಾಡಬೇಡಿ! ಯೆಹೋವನು ನಮಗೆ ದಯಪಾಲಿಸಿರುವುದನ್ನು ಕುರಿತು ಯೋಚಿಸಿ! ನಮ್ಮ ಮೇಲೆ ಧಾಳಿಮಾಡಿದ ಶತ್ರುಗಳನ್ನು ಸೋಲಿಸಲು ಯೆಹೋವನು ನಮ್ಮನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:23
16 ತಿಳಿವುಗಳ ಹೋಲಿಕೆ  

ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು


ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.


ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ - ಸಹೋದರರೇ, ಇಂಥ ದುಷ್ಟತನವನ್ನು ನಡಿಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.


ನೀವು ಹೊಟ್ಟೆತುಂಬಾ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟದ್ದಕ್ಕಾಗಿ ಆತನನ್ನು ಸ್ತುತಿಸಬೇಕು.


ಅಣ್ಣಂದಿರೇ, ಈ ಪಾತಕವನ್ನು ಮಾಡಬೇಡಿರಿ. ಕೇಳಿರಿ,


ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.


ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.


ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮುರ್ಖರೂ ಆದ ಕೆಲವು ಮಂದಿ - ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವದಿಲ್ಲ. ತಮ್ಮತಮ್ಮ ಹೆಂಡರುಮಕ್ಕಳನ್ನು ಕರಕೊಂಡು ಹೋಗಿಬಿಡಲಿ ಅಂದರು.


ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯ್ದವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು ಎಂದು ಉತ್ತರಕೊಟ್ಟನು.


ಈ ಭಾಗ್ಯವು ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗುಂಟಾಯಿತು ಅಂದುಕೊಂಡೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು