Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:6 - ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:6
51 ತಿಳಿವುಗಳ ಹೋಲಿಕೆ  

ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಮಾಡುವದೇನು?


ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವದು ಆತನಿಂದಲೇ.


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಸೇರಿ ಕೇಳಿಸಿತು.


ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು.


ಆದದರಿಂದ - ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು? ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ಸಭಾನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ;


ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವದು ಎಂಬದಾಗಿ ತನಗೆ ಹೇಳಲ್ಪಟ್ಟ ಮಾತು ನೆರವೇರುವದಕ್ಕೆ ಮಾರ್ಗ ತೋರದೆ ಇರುವದರಿಂದ ಅಬ್ರಹಾಮನು ತಾನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ನಿರೀಕ್ಷಿಸಿ ನಂಬಿದನು.


ನಾನು ಬಹಳವಾಗಿ ಕುಗ್ಗಿಹೋದೆನೆಂದು ಹೇಳಿದಾಗಲೂ ಮನುಷ್ಯರೆಲ್ಲಾ ಟೊಳ್ಳೇ ಎಂದು ಭ್ರಾಂತಿಯಿಂದ ಉಸಿರಿದಾಗಲೂ


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಆಗ ಮೋಶೆಯು ಯೆಹೋವನಿಗೆ ಮೊರೆಯಿಟ್ಟು - ಈ ಜನರಿಗೋಸ್ಕರ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲಾ ಅಂದನು.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ;


ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು -


ಅವರು ಈ ಮಾತನ್ನು ಕೇಳಿ ಆತನನ್ನು ಕೊಲ್ಲುವದಕ್ಕಾಗಿ ಕಲ್ಲು ತಕ್ಕೊಳ್ಳಲು ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟುಹೋದನು.


ಆದರೆ ಜನಸಮೂಹದವರೆಲ್ಲರೂ [ಕೇಳಲೊಲ್ಲದೆ] ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರಲಾಗಿ ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಾಯೇಲ್ಯರೆಲ್ಲರಿಗೂ ಕಾಣಿಸಿತು.


ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಮನಸ್ಸಿಗೆ ಏನೂ ಉಪಶಮನವಾಗಲಿಲ್ಲ, ಎಲ್ಲಾ ವಿಷಯಗಳಲ್ಲಿಯೂ ನಮಗೆ ಸಂಕಟವಿತ್ತು; ಹೊರಗೆ ಕಲಹ, ಒಳಗೆ ಭಯ.


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ನಮಗೆ ಸಂಕಟಬರುತ್ತದೋ ಅದರಿಂದ ನಿಮಗೆ ಧೈರ್ಯವೂ ರಕ್ಷಣೆಯೂ ಉಂಟಾಗುತ್ತದೆ; ನಮಗೆ ಸಂಕಟ ಪರಿಹಾರವಾಗುತ್ತದೋ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ.


ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.


ಪಿಲಾತನು ಅವರನ್ನು - ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಎಂದು ಕೇಳಲು ಎಲ್ಲರೂ - ಅವನನ್ನು ಶಿಲುಬೆಗೆ ಹಾಕಿಸು ಅಂದರು.


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವದು. ನನ್ನ ರಕ್ಷಣೆಯು ಆತನಿಂದಲೇ.


ನಿನ್ನ ಜಲಪಾತಗಳಿಂದುಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕೂಗುತ್ತದೋ ಎಂಬಂತಿರುವದು. ಹಾಗೆಯೇ ನೀನು ಅಲ್ಲಕಲ್ಲೋಲವಾದ [ದುಃಖ ಪ್ರವಾಹದ] ತೆರೆಗಳನ್ನು ನನ್ನ ತಲೆಯ ಮೇಲೆ ದಾಟಿಸಿದಿಯಲ್ಲಾ.


ದಾನ್ಯರು ಅವನಿಗೆ - ನಮ್ಮಲ್ಲಿ ಕೆಲವರು ಸಿಟ್ಟಿನವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಟ್ಟೀರಿ; ಆದದರಿಂದ ಬಾಯಿಮುಚ್ಚಿಕೊಂಡು ಹೋಗು ಎಂದು ಹೇಳಿ ಮುಂದೆ ನಡೆದರು.


ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನೂ ಕುರಿ ದನ ಒಂಟೆಗಳನ್ನೂ ಎರಡು ಪಾಳೆಯ ಮಾಡಿ -


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನಿನ್ನ ತಂದೆಯೂ ಅವನ ಜನರೂ ಶೂರರಾಗಿದ್ದಾರೆಂದೂ ಈಗ ಅವರು ಮರಿಯನ್ನು ಕಳಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದೂ ನಿನಗೆ ಗೊತ್ತುಂಟಲ್ಲಾ; ಇದಲ್ಲದೆ ಅವನು ಯುದ್ಧನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವದಿಲ್ಲ.


ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂಡುವದಕ್ಕಾಗಿ ಹತ್ತಿರ ಬರಲು ದೇವರ ಮನುಷ್ಯನು ಅವನಿಗೆ - ಬಿಡು, ಆಕೆಯ ಮನಸ್ಸಿನಲ್ಲಿ ಬಹುದುಃಖವಿರುವ ಹಾಗೆ ತೋರುತ್ತದೆ; ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸಲಿಲ್ಲ, ಮರೆ ಮಾಡಿದ್ದಾನೆ ಎಂದು ಹೇಳಿದನು.


ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ ದಾವೀದನಿಗೆ -


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ನನ್ನ ದೇವರೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ಆಗಿದ್ದಾನೆ.


ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ.


ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ ಅನ್ಯಾಯ ಬಲಾತ್ಕಾರಿಯ ವಶದಿಂದಲೂ ತಪ್ಪಿಸು.


ಕರ್ತನಾದ ಯೆಹೋವನೇ, ಬಾಲ್ಯಾರಭ್ಯ ನನ್ನ ನಿರೀಕ್ಷೆಯೂ ಭರವಸವೂ ನೀನಲ್ಲವೋ?


ಇಕ್ಕಟ್ಟಿನಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಕೂಗಿಕೊಂಡೆನು, ಆಹಾ, ನನ್ನ ಧ್ವನಿಯನ್ನು ಲಾಲಿಸಿದಿ.


ಇಸ್ರಾಯೇಲ್ಯರು ತಿರಿಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹ ಕಟ್ಟಿದ ಸ್ಥಳದಲ್ಲೇ ತಿರಿಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.


ಆಗ ಸಮುವೇಲನು ಸೌಲನನ್ನು - ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದಿ ಎಂದು ಕೇಳಿದನು. ಅದಕ್ಕೆ ಸೌಲನು - ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಬಿಟ್ಟು ದೂರಹೋಗಿದ್ದಾನೆ; ಆತನು ನನಗೆ ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು ಅಂದನು.


ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು