Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:8 - ಕನ್ನಡ ಸತ್ಯವೇದವು J.V. (BSI)

8 ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:8
21 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.


ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು.


ದಾವೀದನು ಯೆಹೋವನನ್ನು - ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿ ಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟದರಿಂದ


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ನೆಟ್ಟಗೆ ಹೋಗಿ ಅವರ ಮೇಲೆ ಬೀಳಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು.


(ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ - ನಾವು ತಿರಿಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ ಎಂದು ಕೇಳಲು ಆತನು - ಹೋಗಿ ಯುದ್ಧಮಾಡಿರಿ ಅಂದನು.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ - ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಯೆಹೋವನನ್ನು ಕೇಳಲು ಆತನು - ಮೊದಲು ಯೆಹೂದಕುಲದವರು ಹೋಗಲಿ ಎಂದು ಹೇಳಿದನು.


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವದರಿಂದ ಇಸ್ರಾಯೇಲ್ಯರು - ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ - ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು ಅಂದನು.


ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಿಕೊಂಡರೂ ಆತನು ಅವನಿಗೆ ಆ ದಿವಸ ಉತ್ತರ ಕೊಡಲೇ ಇಲ್ಲ.


ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತೆಗೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ ಸೆರೆಯಲ್ಲಿದ್ದ ಸ್ತ್ರೀಯರನ್ನೂ ವಿುಕ್ಕಾದವರನ್ನೂ ತೆಗೆದುಕೊಂಡು ಬಂದನು.


ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು, ಅವರಲ್ಲಿ ನಮ್ಮ ಕೋರಿಕೆಯನ್ನು ತೀರಿಸಿಕೊಳ್ಳುವೆವು, ನಾವು ಕತ್ತಿಯನ್ನು ಹಿರಿದು ಭುಜಬಲದಿಂದ ಅವರನ್ನು ಸಂಹಾರ ಮಾಡುವೆವು ಎಂಬದಾಗಿ ನಮ್ಮ ಶತ್ರುಗಳು ಮಾತಾಡಿಕೊಳ್ಳುತ್ತಿದ್ದರು.


ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ ಗಂಡುಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರಿಗಿ ತೆಗೆದುಕೊಂಡು ಬಂದನು.


ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದವರಾಗಿದ್ದರೂ ಹಿಂದಟ್ಟುತ್ತಾ ಯೊರ್ದನನ್ನು ದಾಟಿ [ಸುಖೋತಿಗೆ] ಬಂದರು.


ಅವರು - ಆ ಮನುಷ್ಯನು ಇಲ್ಲಿಗೆ ಬರುವನೋ ಎಂದು ಯೆಹೋವನನ್ನು ವಿಚಾರಿಸಿದಾಗ ಆತನು - ಬಂದಿದ್ದಾನೆ; ಇಗೋ, ಸಾಮಾನುಗಳಲ್ಲಿ ಅಡಗಿಕೊಂಡಿದ್ದಾನೆ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು