Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:13 - ಕನ್ನಡ ಸತ್ಯವೇದವು J.V. (BSI)

13 ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ ಏಳು ದಿವಸ ಉಪವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ಈ ಜನರು ಸೌಲ ಮತ್ತು ಅವನ ಮೂರು ಮಕ್ಕಳ ಮೂಳೆಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನ ಪಿಚುಲ ಮರದ ಕೆಳಗೆ ಸಮಾಧಿಮಾಡಿದರು. ನಂತರ ಯಾಬೇಷಿನ ಜನರು ದುಃಖದಿಂದ ಏಳು ದಿನಗಳ ಕಾಲ ಉಪವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:13
8 ತಿಳಿವುಗಳ ಹೋಲಿಕೆ  

ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.


ಒಂದು ದಿವಸ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕೂತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ಗೊತ್ತಾಗಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.


ದಾವೀದನೂ ಅವನ ಜನರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿ ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.


ಅಲ್ಲಿ ರೆಬೆಕ್ಕಳ ದಾದಿಯಾದ ದೆಬೋರಳು ಸತ್ತುಹೋಗಲು ಅವರು ಆಕೆಗೆ ಬೇತೇಲಿನ ತಗ್ಗಿನಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.


ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು