1 ಸಮುಯೇಲ 31:4 - ಕನ್ನಡ ಸತ್ಯವೇದವು J.V. (BSI)4 ಆದದರಿಂದ ಸೌಲನು ಬಹುಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು. ಅಧ್ಯಾಯವನ್ನು ನೋಡಿ |