Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:1 - ಕನ್ನಡ ಸತ್ಯವೇದವು J.V. (BSI)

1 ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು. ಇಸ್ರಾಯೇಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯ ಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:1
14 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲ್ಯರು ಇಜ್ರೇಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು.


ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.


ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ


ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು; ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.


ಯೆಹೋವನು ಸಮುವೇಲನಿಗೆ - ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷ ಕಾರ್ಯವನ್ನು ನಡಿಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.


ಉಮ್ಮಾ, ಅಫೇಕ್, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳೂ


ಎಷಾನ್, ಯಾನೂಮ್, ಬೇತ್‍ತಪ್ಪೂಹ, ಅಫೇಕಾ, ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ;


ಅಫೇಕದ ಅರಸನು 1, ಲಷ್ಷಾರೋನಿನ ಅರಸನು 1;


ಗೆಷೂರ್ಯರ ಸೀಮೆಯು, ದಕ್ಷಿಣದಲ್ಲಿದ್ದ ಅವ್ವೀಯರ ದೇಶವು ಇವುಗಳೂ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು,


ಇವರು ಇಸ್ರಾಯೇಲ್ಯರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲ್ಯರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲ್ಯರನ್ನು ಸಂಹರಿಸಿದರು.


ಇವರೆಲ್ಲಾ ಏಕಮನಸ್ಸಿನಿಂದ ಕೂಡಿ ನಿನಗೇ ವಿರೋಧವಾಗಿ ಒಳಸಂಚು ಮಾಡುತ್ತಾರಲ್ಲಾ;


ಇಸ್ರಾಯೇಲ ಪುರುಷರೇ, ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,


ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ ನಮಗೊಬ್ಬ ಅರಸನನ್ನು ನೇವಿುಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದದರಿಂದ ನೀವು ಕುಲಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ ಎಂದು ಅಪ್ಪಣೆ ಮಾಡಿದನು.


ಒಂದು ವರುಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಅಫೇಕಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು