Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:3 - ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ - ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಗೆ ನಮ್ಮನ್ನು ತಪ್ಪಿಸಲಿ ಎಂದು ಆಲೋಚನೆ ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು, “ಈ ಹೊತ್ತು ಯೆಹೋವ ದೇವರು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿದ್ದೇನು? ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ, ನಾವು ಅದನ್ನು ಶೀಲೋವಿನಿಂದ ತರಿಸೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:3
34 ತಿಳಿವುಗಳ ಹೋಲಿಕೆ  

ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು; ಇಂಥವರ ಸಹವಾಸವನ್ನೂ ಮಾಡದಿರು.


ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ ಎಂಬುವ ಸುಳ್ಳುಮಾತುಗಳ ಮೇಲೆ ಭರವಸವಿಡಬೇಡಿರಿ.


ನೀವು ದೇಶದಲ್ಲಿ ಹೆಚ್ಚಿನ ವೃದ್ಧಿಗೆ ಬಂದಿರುವಾಗ ಇನ್ನು ಯೆಹೋವನ ನಿಬಂಧನಮಂಜೂಷದ ಪ್ರಸ್ತಾಪವಿರದು, ಅದು ಜ್ಞಾಪಕಕ್ಕೆಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು, ಇದು ಯೆಹೋವನ ನುಡಿ.


ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವದೇಕೆ ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡಿಸಿ ನಿಮ್ಮ ಆಳುಗಳನ್ನು ದುಡಿತಕ್ಕೆಳೆಯುತ್ತೀರಿ.


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಚಾಚಿದ ಬಲಗೈಯನ್ನು ಯಾಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿಂದ ತೆಗೆದು ಅವರನ್ನು ಸಂಹರಿಸಿಬಿಡು.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ಯೆಹೋವನ ನಿಬಂಧನ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ಅರಸನು ಚಾದೋಕನಿಗೆ - ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು; ಯೆಹೋವನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಆತನನ್ನೂ ಆತನ ಆಲಯವನ್ನೂ ನೋಡುವ ಹಾಗೆ ತಾನೇ ನನ್ನನ್ನು ಹಿಂದಕ್ಕೆ ಬರಮಾಡುವನು.


ಅನಂತರ ಸೌಲನು ಅಹೀಯನಿಗೆ - ಏಫೋದನ್ನು ತೆಗೆದುಕೊಂಡು ಬಾ ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲ್ಯರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.


ಮತ್ತು ಯೆಹೋಶುವನು - ಅಯ್ಯೋ ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡಬೇಕೆಂದಿದ್ದೀಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ಹೊಳೆಯ ಆಚೆಯಲ್ಲಿಯೇ ಇದ್ದರೆ ಎಷ್ಟೋ ಒಳ್ಳೇದಾಗಿತ್ತು.


ನೀವು ಅವರಿಗೆ - ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನನ್ನು ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತುಹೋಯಿತೆಂಬದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲವೂ ಸಾಕ್ಷಿಗಳಾಗಿರುವವು ಅಂದನು.


ನೀವು ಈ ಧರ್ಮಶಾಸ್ತ್ರಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. [ಇಸ್ರಾಯೇಲ್ಯರೇ,] ಅಲ್ಲಿ ಇದು ನಿಮಗೆ ವಿರೋಧವಾಗಿ ಸಾಕ್ಷಿಕೊಡುವದಾಗಿರಲಿ.


ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು? ಎಂಬದಾಗಿ ವಿಚಾರಿಸುವರು.


ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನಿಗೆ - ದೇವರ ಸಾಮಾನುಗಳನ್ನೂ ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.


ಯೆಹೋವನ ಮಂಜೂಷವು ಹೊರಡುವಾಗ ಮೋಶೆ - ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಹಗೆಗಾರರು ಬೆಂಗೊಟ್ಟು ಓಡಿಹೋಗಲಿ ಎಂದು ಹೇಳುವನು.


ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳುಕೊಳ್ಳತಕ್ಕ ಸ್ಥಳವನ್ನು ನೋಡುವದಕ್ಕೋಸ್ಕರ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರ ಮುಂದಾಗಿ ಹೋಗುತ್ತಿತ್ತು.


ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ; ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ ಅಂದನು.


ಕರ್ತನೇ, ಇಸ್ರಾಯೇಲ್ಯರು ಶತ್ರುಗಳಿಗೆ ಬೆನ್ನು ತೋರಿಸಿದ್ದಾರಲ್ಲಾ. ಇನ್ನೇನು ಹೇಳಲಿ?


ಅನಂತರ ಆಕೆಯು ಮೂರು ವರುಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರಸಹಿತವಾಗಿ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು; ಮಗನು ಇನ್ನೂ ಚಿಕ್ಕವನಾಗಿದ್ದನು.


ಇವರು ಇಸ್ರಾಯೇಲ್ಯರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲ್ಯರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲ್ಯರನ್ನು ಸಂಹರಿಸಿದರು.


ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತೆ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು