Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:7 - ಕನ್ನಡ ಸತ್ಯವೇದವು J.V. (BSI)

7 ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು - ಅಯ್ಯೋ, ಮುಂಚೆ ಹೀಗಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಫಿಲಿಷ್ಟಿಯರು ಭಯಗೊಂಡು, “ದೇವರುಗಳೇ ಅವರ ಪಾಳೆಯಕ್ಕೆ ಬಂದಿದ್ದಾರೆ! ನಾವು ತೊಂದರೆಯಲ್ಲಿದ್ದೇವೆ. ಹಿಂದೆಂದೂ ಈ ರೀತಿ ಆಗಿರಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:7
6 ತಿಳಿವುಗಳ ಹೋಲಿಕೆ  

ಅವರ ಶರಣನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಮಂದಿ ಸೋತುಹೋಗುತ್ತಿದ್ದರೋ? ಯೆಹೋವನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತುಸಾವಿರ ಮಂದಿ ಓಡಿಹೋಗುತ್ತಿದ್ದರೋ?


ಆತನು ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಬಹು ಕಷ್ಟದಿಂದ ಹೊಡಕೊಂಡು ಹೋದರು. ಆಗ ಐಗುಪ್ತ್ಯರು - ನಾವು ಇಸ್ರಾಯೇಲ್ಯರ ಮುಂದೆ ನಿಲ್ಲಲಾರೆವು, ಓಡಿಹೋಗೋಣ; ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ ಎಂದು ಹೇಳಿಕೊಂಡರು.


ಫಿಲಿಷ್ಟಿಯರು ಇದನ್ನು ಕೇಳಿ - ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣವೆಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ಗೊತ್ತಾಯಿತು.


ಅಯ್ಯೋ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!


ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು