Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:2 - ಕನ್ನಡ ಸತ್ಯವೇದವು J.V. (BSI)

2 ದಾಗೋನನ ಗುಡಿಗೆ ಒಯ್ದು ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಅದನ್ನು ದಾಗೋನನ ಮಗ್ಗುಲಲ್ಲೇ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ದಾಗೋನಿನ ಪಕ್ಕದಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫಿಲಿಷ್ಟಿಯರು ದೇವರ ಮಂಜೂಷವನ್ನು ದಾಗೋನನ ಗುಡಿಗೆ ತೆಗೆದುಕೊಂಡುಹೋಗಿ, ದಾಗೋನನ ಪಕ್ಕದಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:2
7 ತಿಳಿವುಗಳ ಹೋಲಿಕೆ  

ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಕೂಡಿಬಂದರು.


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ಅದನ್ನು ಸವಿಯುತ್ತಾ ಯೆರೂಸಲೇವಿುನ ದೇವಾಲಯದೊಳಗಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ತಾನೂ ತನ್ನ ಮುಖಂಡರೂ ಪತ್ನ್ಯುಪಪತ್ನಿಯರೂ ಕುಡಿಯುವದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.


ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು; ಅವನ ಬುರುಡೆಯನ್ನು ದಾಗೋನನ ಗುಡಿಯಲ್ಲಿ ಜಡಿದರು.


ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.


ಕೂಡಲೆ ಬಿರುಗಾಳಿಯಂತೆ ಬೀಸುತ್ತಾ ಹಾದುಹೋಗುವರು; ಸ್ವಬಲವೇ ದೇವರು ಎನ್ನುವ ಅಪರಾಧಕ್ಕೆ ಒಳಗಾಗುವರು.


ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲುಕೊಳ್ಳುವದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವದನ್ನು ಕಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು