Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:5 - ಕನ್ನಡ ಸತ್ಯವೇದವು J.V. (BSI)

5 ಇಂದಿನವರೆಗೂ ದಾಗೋನನ ಯಾಜಕನೂ ಅವನ ಬಳಿಗೆ ಬರುವವರೆಲ್ಲರೂ ಅಷ್ಡೋದಿನ ಗುಡಿಯ ಹೊಸ್ತಿಲನ್ನು ತುಳಿಯದಿರುವದಕ್ಕೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದ್ದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ಮತ್ತು ದಾಗೋನನ ಮನೆಗೆ ಬರುವವರೆಲ್ಲರೂ ಅಷ್ಡೋದಿನ ಗುಡಿಯ ಹೊಸ್ತಿಲನ್ನು ಇಂದಿಗೂ ತುಳಿಯದಿರುವುದಕ್ಕೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 (ಇಂದಿನವರೆಗೂ ದಾಗೋನನ ಯಾಜಕರು ಹಾಗು ಅವನ ಬಳಿಗೆ ಬರುವವರೆಲ್ಲರು ಅಷ್ಡೋದಿನ ಗುಡಿಯ ಹೊಸ್ತಿಲನ್ನು ತುಳಿಯದಿರುವುದಕ್ಕೆ ಇದೇ ಕಾರಣ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದಕಾರಣವೇ ಇಂದಿಗೂ ಸಹ ಅಷ್ಡೋದಿನಲ್ಲಿ ದಾಗೋನನ ಗುಡಿಯನ್ನು ಪ್ರವೇಶಿಸುವ ಯಾಜಕರಾಗಲಿ ಇಲ್ಲವೆ ಇತರೆ ಜನರಾಗಲಿ ಹೊಸ್ತಿಲನ್ನು ತುಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದ್ದರಿಂದ ಈ ದಿನದವರೆಗೂ ದಾಗೋನನ ಯಾಜಕರೂ, ದಾಗೋನನ ಗುಡಿಯನ್ನು ಪ್ರವೇಶಿಸುವವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿಲನ್ನು ತುಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:5
5 ತಿಳಿವುಗಳ ಹೋಲಿಕೆ  

ಹೊಸ್ತಿಲಹಾರಿ ನುಗ್ಗಿ ಮೋಸಹಿಂಸೆಗಳಿಂದ ದೋಚಿದ್ದನ್ನು ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.


ಯೆಹೋವನ ಸೇನಾಪತಿಯು - ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು ಎಂದು ಯೆಹೋಶುವನಿಗೆ ಹೇಳಿದನು. ಅವನು ಹಾಗೆಯೇ ಮಾಡಿದನು.


ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವದಕ್ಕೆ ಸಿದ್ಧನಾಗಿ ಬಾಗಲನ್ನು ತೆರೆಯಲು ತನ್ನ ಉಪಪತ್ನಿಯು ಬಾಗಲ ಮುಂದೆ ಬಿದ್ದಿರುವದನ್ನೂ ಆಕೆಯ ಕೈಗಳು ಹೊಸ್ತಲಿನ ಮೇಲಿರುವದನ್ನೂ ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು