Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:8 - ಕನ್ನಡ ಸತ್ಯವೇದವು J.V. (BSI)

8 ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ - ಇಸ್ರಾಯೇಲ್‍ದೇವರ ಮಂಜೂಷವನ್ನು ಏನು ಮಾಡೋಣ ಎಂದು ಕೇಳಲು ಅವರು - ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಅವರು ಹಾಗೆಯೇ ಇಸ್ರಾಯೇಲ್‍ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಫಿಲಿಷ್ಟಿಯದ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ವಿಚಾರಿಸಿದರು. ಅವರು ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಹಾಗೆಯೇ ಇಸ್ರಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. ಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:8
11 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು.


ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ?


ಉಭಯರ ಮಧ್ಯದಲ್ಲಿ ಒಂದು ತಗ್ಗು ಇತ್ತು. ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.


ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್‍ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.


ಅಷ್ಡೋದಿನ ಜನರು ಅದನ್ನು ನೋಡಿ - ಇಸ್ರಾಯೇಲ್‍ದೇವರ ಮಂಜೂಷವು ನಮ್ಮಲ್ಲಿರಬಾರದು; ಆತನ ಹಸ್ತವು ನಮಗೂ ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ ಎಂದು ಹೇಳಿ


ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ - ಯೆಹೋವನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.


ಅಲ್ಲಿಂದ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರತೀರದಲ್ಲಿ ಮುಗಿಯುವದು.


ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿಹೇಳುವವರನ್ನೂ ಕರೆದು ಅವರಿಗೆ - ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ತಿರಿಗಿ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು? ತಿಳಿಸಿರಿ ಅನ್ನಲು ಅವರು -


ಇಸ್ರಾಯೇಲ್ಯರೂ ಯೆಹೂದ್ಯರೂ ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ ಎಕ್ರೋನಿನ ಬಾಗಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿವಿುನಿಂದ ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.


ಇವನ ಮಗನು ಜಾಬಾದ್; ಇವನ ಮಕ್ಕಳು - ಶೂತೆಲಹ, ಎಜೆರ್, ಎಲ್ಲಾದ್ ಎಂಬವರು. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದದರಿಂದ ಆ ದೇಶದ ಮೂಲನಿವಾಸಿಗಳು ಇವರನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು