Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:9 - ಕನ್ನಡ ಸತ್ಯವೇದವು J.V. (BSI)

9 ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಂಜೂಷವು ಅಲ್ಲಿ ಹೋದ ಮೇಲೆ ಸರ್ವೇಶ್ವರನ ಹಸ್ತ ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲ ಎದ್ದಿತು. ಸರ್ವೇಶ್ವರ ಆ ಊರಿನ ಚಿಕ್ಕವರಲ್ಲೂ ದೊಡ್ಡವರಲ್ಲೂ ಗಡ್ಡೆಗಳನ್ನು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು “ಗತ್”ಗೆ ಕಳುಹಿಸಿದ ನಂತರ ಯೆಹೋವನು “ಗತ್” ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:9
11 ತಿಳಿವುಗಳ ಹೋಲಿಕೆ  

ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು.


ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರಿಗಿ ಇಸ್ರಾಯೇಲ್ಯರ ಪ್ರಾಂತದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ಯೆಹೋವನ ಹಸ್ತವು ಅವರಿಗೆ ವಿರೋಧವಾದದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.


ನೀವು ಯೆಹೋವನ ಮಾತನ್ನು ಕೇಳದೆಯೂ ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವದು.


ತನ್ನ ಶತ್ರುಗಳನ್ನು ಮುರಿಬಡಿದು ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.


ಸಿಂಹದ ಕಡೆಯಿಂದ ಓಡಿದವನಿಗೆ ಕರಡಿಯು ಎದುರುಬಿದ್ದಂತಾಗುವದು; ಅವನು ಮನೆಗೆ ಓಡಿಬಂದು ಕೈಯನ್ನು ಗೋಡೆಯ ಮೇಲೆ ಊರಲು ಹಾವು ಕಚ್ಚಿದ ಹಾಗಾಗುವದು.


ಯೆಹೋವನ ಮಂಜೂಷವನ್ನೂ ಚಿನ್ನದ ಇಲಿಗಳೂ ಗಡ್ಡೆಗಳೂ ಉಳ್ಳ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು.


ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್‍ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.


ಆದದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು - ನೋಡಿರಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವದಕ್ಕೋಸ್ಕರ ಇಸ್ರಾಯೇಲ್‍ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆಂದು ಕೂಗಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು