Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:14 - ಕನ್ನಡ ಸತ್ಯವೇದವು J.V. (BSI)

14 ಬಂಡಿಯು ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಲ್ಲಲು ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಒಡೆದು ಅಗ್ನಿಮಾಡಿ ಆ ಹಸುಗಳನ್ನು ಯೆಹೋವನಿಗೋಸ್ಕರ ಆಹುತಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಬಂಡಿ ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ಒಂದು ದೊಡ್ಡ ಕಲ್ಲಿನ ಬಳಿ ಬಂದು ನಿಂತಿತು. ಅವರು ಅಲ್ಲಿಗೆ ಹೋಗಿ, ಬಂಡಿಯ ಕಟ್ಟಿಗೆಗಳನ್ನು ಮುರಿದು, ಅಗ್ನಿ ಮಾಡಿ ಆ ಹಸುಗಳನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14-15 ಬೇತ್‌ಷೆಮೆಷಿನ ಯೆಹೋಶುವನಿಗೆ ಸೇರಿದ ಹೊಲಕ್ಕೆ ಆ ಬಂಡಿಯು ಬಂದಿತು. ಆ ಹೊಲದ ಒಂದು ದೊಡ್ಡ ಕಲ್ಲಿನ ಬಳಿ ಆ ಬಂಡಿಯು ನಿಂತಿತು. ಬೇತ್‌ಷೆಮೆಷಿನ ಜನರು ಬಂಡಿಯ ಕಟ್ಟಿಗೆಗಳನ್ನು ಒಡೆದು ಆ ಹಸುಗಳನ್ನು ಯೆಹೋವನಿಗೆ ಆಹುತಿಯಾಗಿ ಅರ್ಪಿಸಿದರು. ಕೆಲವು ಲೇವಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಅಲ್ಲದೆ ಅವರು ಚಿನ್ನದ ಮಾದರಿಗಳಿದ್ದ ಚೀಲವನ್ನು ಇಳಿಸಿದರು. ಲೇವಿಯರು ಯೆಹೋವನ ಪೆಟ್ಟಿಗೆಯನ್ನು ಮತ್ತು ಆ ಚೀಲವನ್ನು ದೊಡ್ಡಕಲ್ಲಿನ ಮೇಲಿಟ್ಟರು. ಅದೇ ದಿನ ಬೇತ್‌ಷೆಮೆಷಿನ ಜನರು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಬಂಡಿಯು ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಬಂಡೆ ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಹಸುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:14
13 ತಿಳಿವುಗಳ ಹೋಲಿಕೆ  

ಆಗ ಅರೌನನು ದಾವೀದನಿಗೆ - ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಯಜ್ಞಕ್ಕೆ ಹೋರಿಗಳೂ ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.


ಮರುದಿವಸ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.


ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ - ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.


ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ದಯವಿಟ್ಟು ನನಗೆ ಅಪ್ಪಣೆಕೊಡು. ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರುತ್ತೇನೆ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ ಎಂದು ಉತ್ತರ ಕೊಟ್ಟನು.


ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು - ಜನರು ಗೋಳಾಡುವದಕ್ಕೇನು ಕಾರಣವೆಂದು ಕೇಳಲು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.


ಈ ಗುಡ್ಡದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಿಂದ ಒಂದು ಯಜ್ಞವೇದಿಯನ್ನು ಕಟ್ಟಿಸಿ ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು ಎಂದು ಹೇಳಿದನು.


ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಬೇತ್‍ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹುಸಂತೋಷಪಟ್ಟರು.


ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಪ್ರಭುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮನಗರಗಳ ಸಂಖ್ಯೆಗೂ ಸರಿಯಾಗಿದ್ದವು. ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇಂದಿನವರೆಗೂ ಇರುವ ಯೆಹೋವನ ಮಂಜೂಷವು ಇಡಲ್ಪಟ್ಟ ಆ ದೊಡ್ಡ ಕಲ್ಲೇ ಈ ಗ್ರಾಮನಗರಗಳಿಗೆ ಮೇರೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು