Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:19 - ಕನ್ನಡ ಸತ್ಯವೇದವು J.V. (BSI)

19 ಬೇತ್‍ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಹಣಿಕಿನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಇದಲ್ಲದೆ ಐವತ್ತು ಸಾವಿರ ಜನರು ಮರಣಹೊಂದಿದರು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನುಂಟುಮಾಡಿದದರಿಂದ ಬೇತ್‍ಷೆಮೆಷಿನವರು ಗೋಳಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:19
14 ತಿಳಿವುಗಳ ಹೋಲಿಕೆ  

ಕೆಹಾತ್ಯರೇ ಒಳಗೆ ಬಂದು ಒಂದು ಕ್ಷಣವಾದರೂ ಆ ಪರಿಶುದ್ಧವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತಾರು.


ಆಗ ಯೆಹೋವನು ಮೋಶೆಗೆ - ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು; ಅವರು ನೋಡಬೇಕೆಂಬ ಆಶೆಯಿಂದ ಯೆಹೋವನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.


ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಈ ತಪ್ಪಿನ ಸಲವಾಗಿ ಅವನನ್ನು ಹತಮಾಡಿದನು; ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಇಸ್ರಾಯೇಲ್ ಜನರು ಈ ದುಃಖಕರವಾದ ವಾಕ್ಯವನ್ನು ಕೇಳಿ ಮನಗುಂದಿದವರಾದರು; ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.


ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಕೆಹಾತ್ಯರ ಗೋತ್ರ ಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವದಕ್ಕೆ ಆಸ್ಪದಕೊಡಬೇಡಿರಿ.


ಇಸ್ರಾಯೇಲ್ಯರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು