Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:21 - ಕನ್ನಡ ಸತ್ಯವೇದವು J.V. (BSI)

21 ಕಿರ್ಯತ್ಯಾರೀವಿುನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಸರ್ವೇಶ್ವರನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕಿರ್ಯತ್ಯಾರೀಮಿನಲ್ಲಿ ಒಬ್ಬ ಯಾಜಕನಿದ್ದನು. ಬೇತ್‌ಷೆಮೆಷಿನ ಜನರು ಕಿರ್ಯತ್ಯಾರೀಮಿನವರ ಬಳಿಗೆ ಸಂದೇಶಕರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ತಂದಿರುವರು. ನೀವು ಬಂದು ಅದನ್ನು ನಿಮ್ಮ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ಕಿರ್ಯತ್ ಯಾರೀಮಿನ ನಿವಾಸಿಗಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವ ದೇವರ ಮಂಜೂಷವನ್ನು ತಿರುಗಿ ಕಳುಹಿಸಿದ್ದಾರೆ, ನೀವು ಬಂದು ಅದನ್ನು ನಿಮ್ಮ ಬಳಿಗೆ ತೆಗೆದುಕೊಂಡು ಹೋಗಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:21
11 ತಿಳಿವುಗಳ ಹೋಲಿಕೆ  

ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯತ್‍ಬಾಳ್ ಅನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯತ್ಯಾರೀಮ್ ಎಂಬ ಪಟ್ಟಣದಲ್ಲಿ ಮುಗಿಯುತ್ತದೆ. ಇದೇ ಅವರ ಪಡುವಣ ಮೇರೆ.


ಹೇಗಂದರೆ - ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಸೇರಿದಂಥ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳು ಅವರವೇ ಆಗಿದ್ದವು.


ಈ ಕೃತ್ಯಗಳನ್ನೆಲ್ಲಾ ನಡಿಸಿದ ಕಾರಣ ನನ್ನ ನಾಮಕ್ಕೆ ನೆಲೆಯಾಗಿ ನಿಮ್ಮ ಭರವಸಕ್ಕೆ ಆಧಾರವಾದ ಆಲಯಕ್ಕೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.


ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲ್ಯರ ಅಧರ್ಮದ ನಿವಿುತ್ತ ನಾನು ಅದಕ್ಕೆ ತಂದ ಗತಿಯನ್ನು ನೋಡಿರಿ.


ತಾನು ಜನಮಧ್ಯದಲ್ಲಿ ವಾಸಿಸುವದಕ್ಕೋಸ್ಕರ ಸಿಲೋವಿನಲ್ಲಿ ಹಾಕಿಸಿದ ಗುಡಾರವನ್ನು ತ್ಯಜಿಸಿಬಿಟ್ಟು


ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀವಿುನ ಬಳಿಯಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀವಿುನ ಪಶ್ಚಿಮದಲ್ಲಿರುತ್ತದೆ.


ಕಿರ್ಯತ್ಯಾರೀಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳೂ ಅವುಗಳ ಗ್ರಾಮಗಳೂ;


ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಅನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.


ಮತ್ತು ಶಮಾಯನ ಮಗನೂ ಕಿರ್ಯತ್‍ಯಾರೀಮ್ ಊರಿನವನೂ ಆದ ಊರೀಯನೆಂಬವನೊಬ್ಬನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.


ದೇವರ ಮಂಜೂಷವನ್ನು ತರುವದಕ್ಕಾಗಿ ಅವರೆಲ್ಲರ ಸಹಿತ ಯೆಹೂದದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು