Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:12 - ಕನ್ನಡ ಸತ್ಯವೇದವು J.V. (BSI)

12 ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:12
18 ತಿಳಿವುಗಳ ಹೋಲಿಕೆ  

ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇರುತ್ತವೆ.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ.


ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.


ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು.


ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ


ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಯೆಹೋವನಿಗೆ ಒಂದು ಯಜ್ಞಪೀಠವೂ ದೇಶದ ಎಲ್ಲೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವವು.


ದೇವರೇ, ನೀನು ಬಾಲ್ಯಾರಭ್ಯ ನನ್ನನ್ನು ಉಪದೇಶಿಸುತ್ತಾ ಬಂದಿದ್ದೀ; ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.


ನಾನು ಹುಟ್ಟಿದಂದಿನಿಂದ ನಿನ್ನನ್ನೇ ಆತುಕೊಂಡಿದ್ದೇನೆ; ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವದು ನಿನ್ನಲ್ಲಿಯೇ.


ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು. ಇಸ್ರಾಯೇಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳುಕೊಂಡರು.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟು -


ಇಸ್ರಾಯೇಲ್ಯರಾದರೋ ವಿುಚ್ಪೆಯಿಂದ ಹೊರಟು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.


ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು