Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:14 - ಕನ್ನಡ ಸತ್ಯವೇದವು J.V. (BSI)

14 ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಾಯೇಲ್ಯರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲ್ಯರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲ್ಯರಿಗೂ ಅಮೋರಿಯರಿಗೂ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಯೇಲರಿಂದ ಕಿತ್ತುಕೊಂಡಿದ್ದ ಎಲ್ಲ ಪಟ್ಟಣಗಳು ಇಸ್ರಯೇಲರಿಗೆ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಫಿಲಿಷ್ಟಿಯರು ಎಕ್ರೋನ್‌ನಿಂದ ಗತ್‌ವರೆಗಿನ ಪ್ರದೇಶದ ಇಸ್ರೇಲ್ ಪಟ್ಟಣಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಇಸ್ರೇಲರು ಆ ಪಟ್ಟಣಗಳನ್ನು ಮರಳಿ ಗೆದ್ದುಕೊಂಡರು ಮತ್ತು ಆ ಪಟ್ಟಣದ ಸುತ್ತಲಿನ ಪ್ರದೇಶಗಳನ್ನು ವಶಪಡಿಸಿಕೊಂಡರು. ಇಸ್ರೇಲರ ಮತ್ತು ಅಮೋರಿಯರ ಮಧ್ಯೆ ಶಾಂತಿ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಫಿಲಿಷ್ಟಿಯರು ಇಸ್ರಾಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲ್ಗೊಂಡು ಗತ್ ಊರಿನವರೆಗೂ ಇರುವ ಪಟ್ಟಣಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತಿರುಗಿ ತೆಗೆದುಕೊಂಡರು. ಅವುಗಳ ಮೇರೆಗಳನ್ನು ಇಸ್ರಾಯೇಲರು ಫಿಲಿಷ್ಟಿಯರ ಕೈಯಿಂದ ಬಿಡಿಸಿಕೊಂಡರು. ಇಸ್ರಾಯೇಲಿಗೂ, ಅಮೋರಿಯರಿಗೂ ಮಧ್ಯೆ ಸಮಾಧಾನ ಉಂಟಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:14
8 ತಿಳಿವುಗಳ ಹೋಲಿಕೆ  

ಅನ್ಯಜನಾಂಗದವರನ್ನು ಸಂಹರಿಸಬೇಕೆಂಬ ಯೆಹೋವನ ಆಜ್ಞೆಗೆ ಅವಿಧೇಯರಾಗಿ


ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.


ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರೂ ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಇವರೂ ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ ಎಂದು ತಿಳಿಸಿದರು.


ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.


ಅಲ್ಲಿಂದ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರತೀರದಲ್ಲಿ ಮುಗಿಯುವದು.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರಿಂದ ಗತ್ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು