Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:3 - ಕನ್ನಡ ಸತ್ಯವೇದವು J.V. (BSI)

3 ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:3
40 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಉತ್ತರಕೊಟ್ಟನು.


ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ ಆತನ ಆಜ್ಞೆಗಳನ್ನೇ ಅನುಸರಿಸಿ ಆತನಿಗೇ ವಿಧೇಯರಾಗಿ ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು; ಆತನನ್ನೇ ಸೇವಿಸಬೇಕು; ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಹೀಗಿರುವದರಿಂದ ನೀವು ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿರ್ರಿ; ಆತನನ್ನು ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ; ಯೆಹೋವನನ್ನೇ ಸೇವಿಸಿರಿ.


ಆಗ ಯೆಹೋಶುವನು ಅವರಿಗೆ - ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದು ಹಾಕಿ ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ ಅಂದನು.


ದೇವರು ಆತ್ಮಸ್ವರೂಪನು; ಆತನನ್ನು ಆರಾಧಿಸುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ಆರಾಧಿಸಬೇಕು ಅಂದನು.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು.


ನಿನ್ನ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು - ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು ಎಂದು ಒಪ್ಪಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿನ್ನನ್ನು ಪ್ರಾರ್ಥಿಸುವದಾದರೆ


ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.


ಆದದರಿಂದ ನೀವು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ನಿಬಂಧನ ಮಂಜೂಷವನ್ನೂ ದೇವಾರಾಧನಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ ಎಂದು ಹೇಳಿದನು.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ?


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಹೃದಯದ ಸಂಕಲ್ಪವು ಮನುಷ್ಯನ ವಶವು; ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವದು.


ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು.


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನನ್ನು ಸೇರಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಪಿತೃಗಳ ದೇವರಾದ ನಿನ್ನನ್ನು ಹುಡುಕಬೇಕೆಂದು ಮನಸ್ಸು ಮಾಡಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದ್ದರಿಂದ


ಅವರು ಯೆಹೋವನನ್ನು ಬಿಟ್ಟು ಬಾಳ್ ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದದರಿಂದ


ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು; ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.


ಗಿಲ್ಯಾದಿನ ಅರ್ಧಭಾಗವೂ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.


ಇದಲ್ಲದೆ ಆತನು ನಿನಗೆ - ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ವಿುಲ್ಕೋಮ್ ಇವುಗಳನ್ನು ಆರಾಧಿಸಿದ್ದೂ ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡಿಯದೆ ಹೋದದ್ದೂ ಇದಕ್ಕೆ ಕಾರಣ.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು.


ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಬೊಂಬೆಗಳನ್ನು ತೊರೆದುಬಿಟ್ಟು ಹಿಂದಿರುಗಿರಿ, ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.


ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ಈ ಇಸ್ರಾಯೇಲ್ಯರು ಬಾಳನ ಪ್ರತಿಮೆಗಳನ್ನು ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು.


ನಿಮ್ಮ ದೇವರಾಗಿರುವ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ತಪ್ಪಿಸುವೆನು ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡನು;


ಇದಲ್ಲದೆ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.


ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ ನೀನು ಇನ್ನು ದಿಕ್ಕಾಪಾಲಾಗಿರುವದಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು