Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:6 - ಕನ್ನಡ ಸತ್ಯವೇದವು J.V. (BSI)

6 ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು - ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ವಿುಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:6
47 ತಿಳಿವುಗಳ ಹೋಲಿಕೆ  

ನಾವು ಸಾಯುವವರು; ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡಲಾರದ ನೀರಿನಂತಿದ್ದೇವೆ. ಮನುಷ್ಯರ ಪ್ರಾಣವನ್ನು ತೆಗೆಯುವದಕ್ಕೆ ದೇವರಿಗೆ ಇಷ್ಟವಿಲ್ಲ; ತಳ್ಳಲ್ಪಟ್ಟವನು ತಿರಿಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


ಅದಕ್ಕೆ ಹನ್ನಳು - ಸ್ವಾಮೀ, ಹಾಗಲ್ಲ; ನಾನು ಬಹುದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ಹೊಯ್ದಿದ್ದೇನೆ.


ಆಗ ಅವರು ಯೆಹೋವನಿಗೆ - ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದೇವೆ ಎಂದು ಮೊರೆಯಿಡಲು ಆತನು ಅವರಿಗೆ -


ಯೆಹೋವನು ಇಂತೆನ್ನುತ್ತಾನೆ - ಈಗಲಾದರೋ ನೀವು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಂಡು ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ;


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ನಮ್ಮ ಪಿತೃಗಳಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡಿಸಿದೆವು.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ;


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು


ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ, ಸ್ಥಿರವಾಗಿದೆಯೋ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -


ಯೆಹೋವನು ಆಕಾಶದಿಂದ ಕಟಾಕ್ಷಿಸಿ ನೋಡುವ ತನಕ


ನೀರು ಸುರಿದು ಸುರಿದು ನನ್ನ ಕಣ್ಣು ಇಂಗಿಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಯುವತಿಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದದರಿಂದ ನನ್ನ ಕರುಳು ಕರಗಿದೆ.


ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪಪಟ್ಟೆನು; ತಿಳುವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು; ನನ್ನ ಯೌವನದ ಅವಮಾನವು ನನ್ನ ಮೇಲೆ ಹೊತ್ತ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.


ನಿನ್ನ ದೇವರು ಎಲ್ಲಿ ಎಂದು ಜನರು ಯಾವಾಗಲೂ ನನ್ನನ್ನು ಗೇಲಿ ಮಾಡುವದರಿಂದ ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ನಾನು ನರನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯ ಮೇಲೆ ಕೈಯಿಟ್ಟುಕೊಳ್ಳುವೆನು.


ಅವನು ಮನುಷ್ಯರ ಮುಂದೆ ನಿಂತು - ನಾನು ಪಾಪಮಾಡಿ ನ್ಯಾಯವನ್ನು ಕೆಡಿಸಿದ್ದರೂ ಆತನು ಮುಯ್ಯಿ ತೀರಿಸದೆ


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ;


ಆದದರಿಂದ ನೀನು ಅವರನ್ನು ಬಾಧಿಸುವ ವಿರೋಧಿಗಳ ಕೈಗೆ ಒಪ್ಪಿಸಿದಿ. ಅವರು ಆ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಬಿಡಿಸಿದಿ.


ಯೆಹೋಷಾಫಾಟನು ಹೆದರಿ ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡು ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.


ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ತಾವು ನನಗೆ ವಿರೋಧವಾಗಿ ನಡೆದದ್ದರಿಂದಲೇ


ಅದಲ್ಲದೆ ಅವನು - ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮುಭಯರನ್ನೂ ನೋಡಿಕೊಳ್ಳುತ್ತಾ ಇರುವನು ಎಂದು ಹೇಳಿದ್ದರಿಂದ ಅದಕ್ಕೆ ವಿುಚ್ಪಾ ಎಂದು ಹೆಸರಾಯಿತು.


ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು.


ಸಮುವೇಲನು ಜೀವದಿಂದಿರುವವರೆಗೆ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಐದನೆಯ ವರುಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇವಿುನವರೆಲ್ಲರೂ ಯೆಹೂದದ ಊರುಗಳಿಂದ ಯೆರೂಸಲೇವಿುಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.


ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,


ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲ್ಯರೆಲ್ಲರೂ ಗಟ್ಟಿಯಾಗಿ ಅತ್ತರು.


ಇಸ್ರಾಯೇಲ್ಯರು ತಿರಿಗಿ ಯೆಹೋವನಿಗೆ - ನಾವು ಪಾಪ ಮಾಡಿದ್ದೇವೆ; ನಿನಗೆ ಸರಿ ಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದುಹಾಕಿ ಯೆಹೋವನನ್ನು ಸೇವಿಸುವವರಾದರು.


(ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ - ನಾವು ತಿರಿಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ ಎಂದು ಕೇಳಲು ಆತನು - ಹೋಗಿ ಯುದ್ಧಮಾಡಿರಿ ಅಂದನು.


ಆಗ ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದವರೆಗೂ ಉಪವಾಸ ಮಾಡಿದರು. ಇದಲ್ಲದೆ ಅವರು ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಸಮುವೇಲನು ಇಸ್ರಾಯೇಲ್ಯರನ್ನು ವಿುಚ್ಪೆಗೆ ಕರಿಸಿ ಯೆಹೋವನ ಸನ್ನಿಧಿಯಲ್ಲಿ ಕೂಡಿಸಿಕೊಂಡು


ಆಗ ಅವರು ಆತನಿಗೆ - ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು ಎಂದು ಮೊರೆಯಿಟ್ಟರು.


ಕೂಡಲೆ ಆ ಮೂರು ಮಂದಿ ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ ಬೇತ್ಲೆಹೇವಿುನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು.


ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು