Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:14 - ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಎಣ್ಣೆ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಿಮಗೆ ಸೇರಿದ ಉತ್ತಮ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಆಲಿವ್ ತೋಪುಗಳನ್ನೂ ರಾಜನು ಕಿತ್ತುಕೊಂಡು ತನ್ನ ಅಧಿಕಾರಿಗಳಿಗೆ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ, ನಿಮ್ಮ ದ್ರಾಕ್ಷಿತೋಟಗಳನ್ನೂ, ನಿಮ್ಮ ಓಲಿವ್ ಮರದ ತೋಪುಗಳನ್ನೂ ತೆಗೆದುಕೊಂಡು ತನ್ನ ಸೇವಕರಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:14
7 ತಿಳಿವುಗಳ ಹೋಲಿಕೆ  

ಇದಲ್ಲದೆ ಪ್ರಭುವು ಪ್ರಜೆಗಳ ಪಿತ್ರಾರ್ಜಿತ ಭೂವಿುಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು; ಸ್ವಂತ ಭೂವಿುಯನ್ನೇ ಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳಕೊಂಡು ದಿಕ್ಕಾಪಾಲಾಗಿ ಹೋದಾನು.


ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ - ನೀನು ಇಸ್ರಾಯೇಲ್ಯರ ಅರಸನೋ; ಎದ್ದು ಊಟಮಾಡಿ ಸಂತೋಷದಿಂದಿರು; ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂದು ನುಡಿದು


ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.


ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ - ಬೆನ್ಯಾಮೀನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ ಎಲ್ಲರನ್ನೂ ಸಹಸ್ರಾಧಿಪತಿಗಳನ್ನಾಗಲಿ ಶತಾಧಿಪತಿಗಳನ್ನಾಗಲಿ ಮಾಡುವನೋ?


ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯಮಾಡುವದಕ್ಕೂ ಅಡಿಗೆ ಮಾಡುವದಕ್ಕೂ ರೊಟ್ಟಿಸುಡುವದಕ್ಕೂ ನೇವಿುಸಿಕೊಳ್ಳುವನು.


ನಿಮ್ಮ ಧಾನ್ಯದ್ರಾಕ್ಷೆಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ ಪರಿವಾರದವರಿಗೂ ಕೊಡುವನು.


ಅಹಾಬನು ನಾಬೋತನಿಗೆ - ನಿನ್ನ ದ್ರಾಕ್ಷೇತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು