Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:5 - ಕನ್ನಡ ಸತ್ಯವೇದವು J.V. (BSI)

5 ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಆದದರಿಂದ ಬೇರೆ ಎಲ್ಲಾ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇವಿುಸು; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ತಾವಂತೂ ಮುದುಕರಾದಿರಿ; ನಿಮ್ಮ ಮಕ್ಕಳು ನಿಮ್ಮ ಮಾರ್ಗದಲ್ಲಿ ನಡೆಯುವುದಿಲ್ಲ. ಆದುದರಿಂದ ಬೇರೆ ಎಲ್ಲ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿ; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನೀನು ವೃದ್ಧನಾದೆ, ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವುದಿಲ್ಲ. ಈಗ ಎಲ್ಲ ರಾಷ್ಟ್ರಗಳ ಹಾಗೆ ನಮಗೆ ನ್ಯಾಯತೀರಿಸುವುದಕ್ಕೆ ಒಬ್ಬ ಅರಸನನ್ನು ನೇಮಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:5
12 ತಿಳಿವುಗಳ ಹೋಲಿಕೆ  

ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ಕೊಟ್ಟನು. ಅವನು ನಾಲ್ವತ್ತು ವರುಷ ಆಳಿದನು.


ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು


ಬೆಟ್ಟದ ಶಿಖರದಿಂದ ನಾನು ಅವರನ್ನು ಕಂಡೆನು; ಗುಡ್ಡದಿಂದ ಅವರನ್ನು ನೋಡಿದೆನು. ಆ ಜನಾಂಗವು ತಾನು ಇತರ ಜನಾಂಗಗಳಂತಲ್ಲವೆಂದು ಭಾವಿಸಿಕೊಂಡು ಪ್ರತ್ಯೇಕವಾಗಿ ವಾಸಿಸುತ್ತದೆ.


ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಮತ್ತು ಇಸ್ರಾಯೇಲ್ಯರ ಶ್ರೇಷ್ಠವಸ್ತುಗಳೆಲ್ಲಾ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೋ ಅಂದನು.


ಇನ್ನು ಮುಂದೆ ಇವನೇ ನಿಮ್ಮನ್ನು ನಡಿಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.


ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇವಿುಸಿದ್ದಾನೆ.


ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ - ನೀನು ನಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು ಅನ್ನಲು


ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ ನಮಗೊಬ್ಬ ಅರಸನನ್ನು ನೇವಿುಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದದರಿಂದ ನೀವು ಕುಲಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ ಎಂದು ಅಪ್ಪಣೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು