Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:6 - ಕನ್ನಡ ಸತ್ಯವೇದವು J.V. (BSI)

6 ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇವಿುಸಿಕೊಡು ಎಂಬ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಲು ಆತನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೀಗೆ ಹಿರಿಯರೆಲ್ಲರು ತಮ್ಮನ್ನು ಮುನ್ನಡೆಸಲು ರಾಜನೊಬ್ಬನು ಬೇಕೆಂದರು. ಸಮುವೇಲನಿಗೆ ಇದು ಸರಿಯೆನಿಸಲಿಲ್ಲ. ಆದ್ದರಿಂದ ಅವನು ಯೆಹೋವನಲ್ಲಿ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು,” ಎಂದು ಅವರು ಹೇಳಿದ್ದು ಸಮುಯೇಲನಿಗೆ ಕೆಟ್ಟದ್ದಾಗಿ ಕಾಣಿಸಿತು. ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:6
18 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು


ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.


ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಯಿತು; ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು ಎಂದು ಹೇಳಿದನು.


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು.


ಇಲ್ಲವಾದರೆ ನೀನು ಬರೆದಿರುವ [ಜೀವಿತರ] ಪಟ್ಟಿಯಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ಸಮುವೇಲನು ತಿರಿಗಿ ಅವರಿಗೆ - ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿ ಕೂಡಿ ಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು ಅನ್ನಲು


ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ ನಮಗೊಬ್ಬ ಅರಸನನ್ನು ನೇವಿುಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದದರಿಂದ ನೀವು ಕುಲಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ ಎಂದು ಅಪ್ಪಣೆ ಮಾಡಿದನು.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು - ನಮಗೊಬ್ಬ ಅರಸನನ್ನು ನೇವಿುಸೆಂದು ನನ್ನನ್ನು ಬೇಡಿಕೊಂಡಿರಿ.


ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ಆ ಪಾಲಕರು ಎಲ್ಲಿ?


ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು